ಕಲ್ಯಾಣ ಕರ್ನಾಟಕದಲ್ಲಿ ವಲಸಿಗರಿಂದ ಕಾಂಗ್ರೆಸ್ ಘರ್ ವಾಪಾಸಿ ಅಭಿಯಾನ

ಬೆಂಗಳೂರು,ಮಾ.23- ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಸೇರಿದ್ದ ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ನಾಯಕರು ಕಾಂಗ್ರೆಸ್‍ಗೆ ಘರ್ ವಾಪಾಸಿಯಾಗುತ್ತಿದ್ದಾರೆ. ಲೋಕಸಭೆ ಚುನಾವಣೆಯ ಆಜುಬಾಜಿನಲ್ಲಿ ಮಾಜಿ ಸಚಿವರಾದ ಎ.ಬಿ.ಮಾಲಕರೆಡ್ಡಿ, ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಣಸೂರ್, ಉಮೇಶ್ ಜಾದವ್ ಸೇರಿದಂತೆ ಕಲಬುರಗಿ ಹಾಗೂ ಯಾದಗಿರಿಯ ಬಹುತೇಕ ನಾಯಕರು ಬಿಜೆಪಿ ಸೇರಿದ್ದರು, ಇದರ ಪರಿಣಾಮ ಸೋಲಿಲ್ಲದ ಸರದಾರ ಎಂದು ಗುರುತಿಸಲ್ಪಟ್ಟಿದ್ದ ಮಲ್ಲಿಕಾರ್ಜುನ ಖರ್ಗೆ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆ ಅನುಭವಿಸಿದ್ದರು. ನಂತರ […]

ಕಾಂಗ್ರೆಸ್ 4ನೇ ಗ್ಯಾರಂಟಿ ಕುರಿತು ಯಡಿಯೂರಪ್ಪ ಲೇವಡಿ

ಬೆಂಗಳೂರು,ಮಾ.21- ಪದವೀಧರರು ಹಾಗೂ ಡಿಪ್ಲೊಮಾ ಮಾಡಿದವರಿಗೆ ಮಾಶಾಸನ ನೀಡುವ ಕಾಂಗ್ರೆಸ್ ಪಕ್ಷದ 4ನೇ ಗ್ಯಾರಂಟಿ ಘೋಷಣೆಗೆ ಯಾವುದೇ ಬೆಲೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಎಲ್ಲಿದೆ? ಯಾವ ರಾಜ್ಯದಲ್ಲಿ ಅನುಷ್ಠಾನ ಮಾಡಲಾಗಿದೆ, ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದವರೇ ಘೋಷಣೆ ಮಾಡಿದ ಯೋಜನೆಗಳು ಅನುಷ್ಠಾನಕ್ಕೆ ಬಂದಿಲ್ಲ.ಹೀಗಾಗಿ 4ನೇ ಗ್ಯಾರಂಟಿ ಯೋಜನೆಗೆ ಬೆಲೆ ಇಲ್ಲ ಎಂದು ಕುಹುಕವಾಡಿದರು. ಈ ಯೋಜನೆ ಅನುಷ್ಠಾನ ಮಾಡಲು ಸಾವಿರಾರು ಕೋಟಿ […]

ರಾಹುಲ್ ಗಾಂಧಿ ರಾಜ್ಯ ಭೇಟಿ ಯಾವುದೇ ಪರಿಣಾಮ ಬೀರಿಲ್ಲ : ಬೊಮ್ಮಾಯಿ

ಹುಬ್ಬಳ್ಳಿ, ಮಾ.21- ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯಾವುದೇ ಪರಿಣಾಮ ಬೀರಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಿಲ್ಲ. ಅವರ ಬೋಗಸ್ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ. ಅವರು ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದಿರುವುದಕ್ಕೂ ಬಹಳ ವ್ಯತ್ಯಾಸವಿದೆ ಎಂದರು. ಲಂಡನ್ ವಿಶ್ವವಿದ್ಯಾಲಯದಲ್ಲಿ ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ದೇಶಾದ್ಯಂತ ಈ ಬಗ್ಗೆ ಖಂಡನೆಯಿದೆ. ಅವರ ಮಾತಿಗೆ […]

ಕಾಂಗ್ರೆಸ್‍ನ ಗ್ಯಾರಂಟಿ ಕಾರ್ಡ್ ನಂಬಬೇಡಿ, ಅದು ಡೂಪ್ಲಿಕೇಟ್ :ಎಚ್‍ಡಿಕೆ

ತಿ.ನರಸೀಪುರ, ಮಾ.21 -ಕಾಂಗ್ರೆಸ್ ಪಕ್ಷದವರು ನೀಡುತ್ತಿರುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಡೂಪ್ಲಿಕೇಟ್ ಕಾರ್ಡ್ ಎಂದು ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. ತಾಲೂಕಿನ ಬನ್ನೂರು ಪಟ್ಟಣದ ಫುಟ್ಬಾಲ್ ಮೈದಾನದಲ್ಲಿ ಆಯೋಜಿಸಿದ್ದ ಪಂಚರತ್ನ ಯಾತ್ರೆಯ ಸಮಾವೇಶದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದವರು ಮತದಾರನ ಆಧಾರ್ ಕಾರ್ಡ್ ಪಡೆದು ಅದ್ಯಾವುದೋ ಕೆಲಸಕ್ಕೆ ಬಾರದ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ ಅದು ಡೂಪ್ಲಿಕೇಟ್ ಕಾರ್ಡ್ ಚುನಾವಣೆಯಲ್ಲಿ ಮತಗಳಿಸಲು ಅವರು ಮಾಡುತ್ತಿರುವ ಗಿಮಿಕ. ಈ ಬಗ್ಗೆ […]

“ಬಿಎಸ್ವೈಗೆ ಕಣ್ಣೀರು ಹಾಕಿಸಿ ಅಧಿಕಾರ ಕಿತ್ತುಕೊಂಡು, ಈಗ ಕಾಲು ಹಿಡಿಯುತ್ತಿದ್ದಾರೆ”

ಬೆಂಗಳೂರು,ಮಾ.1- ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಕಾಲು ಹಿಡಿಯುತ್ತಿರುವ ಬಿಜೆಪಿ, ಈ ಮೊದಲು ಅದೇ ಯಡಿಯೂರಪ್ಪರ ಕಣ್ಣಲ್ಲಿ ನೀರು ಹಾಕಿಸಿ, ಅಧಿಕಾರದಿಂದ ಇಳಿಸಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷರ ಮುಖ ತೋರಿಸಿದರೆ ನಾಲ್ಕು ಮತಗಳು ಸಿಗುವುದಿಲ್ಲ ಎಂಬ ವಾಸ್ತವ ಸಂಗತಿ ಅರಿವಾಗುತ್ತಲೇ ಯಡಿಯೂರಪ್ಪ ಅವರನ್ನು ಉತ್ಸವ ಮೂರ್ತಿ ಮಾಡಲು ಬಿಜೆಪಿ ಹೊರಟ್ಟಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಇದೇ ಬಿಜೆಪಿ ಹಿಂದೆ […]

ಮೋದಿ ಕೈ ಬೀಸಿದರೆಂದರೆ ಜನರಿಗೆ ಬರೆ ಬಿತ್ತು ಎಂದೇ ಅರ್ಥ : ಕಾಂಗ್ರೆಸ್ ಲೇವಡಿ

ಬೆಂಗಳೂರು,ಮಾ.1- ಪ್ರಧಾನಿ ನರೇಂದ್ರ ಮೋದಿ ಒಮ್ಮೆ ಜನರತ್ತಾ ಕೈ ಬೀಸಿ ಹೋದರೆಂದರೆ ಬರೆ ಬಿತ್ತು ಎಂದೇ ಅರ್ಥ ಎಂದು ಕಾಂಗ್ರೆಸ್ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಗೆ ಆಕ್ರೋಶ ವ್ಯಕ್ತ ಪಡಿಸಿದೆ. ಇತ್ತೀಚೆಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದ ಮೋದಿ ಅವರು ಜನರತ್ತ ಕೈ ಬೀಸಿ ಹೋಗಿದ್ದರು. ಅದರ ಬೆನ್ನಲ್ಲೆ ಇಂದು ಬೆಳಗ್ಗೆ ಅಡುಗೆ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಪ್ರತಿ ಸಿಲಿಂಡರ್ ದರ 1105 ರೂಪಾಯಿ ದಾಟಿದೆ. ಬೆಲೆ ಏರಿಕೆಯ, ಹಣದುಬ್ಬರ, ಆದಾಯ […]

ಸಿದ್ದರಾಮಯ್ಯ ಸುಳ್ಳುಗಳು ಸತ್ಯವಾಗಲ್ಲ : ಸಿಎಂ ಕಿಡಿ

ಹುಬ್ಬಳ್ಳಿ,ಫೆ.26- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳಿನ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಅವರು ಹೇಳಿರುವ ಸುಳ್ಳು ಒಂದೊಂದಾಗಿ ಹೊರಬರುತ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅವೇಶನದಲ್ಲಿಯೇ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೆ ಅದು ಸತ್ಯವಾಗುತ್ತದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಸತ್ಯ ಸತ್ಯವೇ, ಸುಳ್ಳು ಸುಳ್ಳೇ. ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗುವುದಿಲ್ಲ. ಸತ್ಯ ಸುಳ್ಳಾಗುವುದಿಲ್ಲ ಎಂದರು. ಕೃಷಿ, […]

“ಕಾಂಗ್ರೆಸ್- ಜೆಡಿಎಸ್ ಗೆ ಎಂದಿಗೂ ಅಚ್ಚೇದಿನ್ ಬರಲ್ಲ”

ಬೆಂಗಳೂರು, ಫೆ.15- ದೇಶದ ಜನರಿಗೆ ಒಳ್ಳೆಯ ದಿನಗಳು ಬಂದಿವೆ. ಪ್ರತಿಪಕ್ಷಗಳಾದ ಜೆಡಿಎಸ್- ಕಾಂಗ್ರೆಸ್ಗೆ ಎಂದೂ ಅಚ್ಚೇದಿನ್ ಬರುವುದಿಲ್ಲ ಎಂದು ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಲೇವಡಿ ಮಾಡಿದ್ದಾರೆ.ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಬೆಂಬಲಿಸಿ ವಿಧಾನ ಪರಿಷತ್ನಲ್ಲಿ ಮಾತನಾಡಿದ ಅವರು, ಅಚ್ಚೆ ದಿನ್ ಎಲ್ಲಿದೆ ಎಂದು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ. ಒಳ್ಳೆಯ ಜನರಿಗಷ್ಟೆ ಅಚ್ಚೆದಿನ್ ಬರುತ್ತದೆ. ದೇಶದ ಜನರಿಗೆ ಈಗಾಗಲೇ ಒಳ್ಳೆಯ ದಿನಗಳು ಬಂದಿವೆ. ಕಾಂಗ್ರೆಸ್, ಜೆಡಿಎಸ್ಗೆ ಅಚ್ಚಾದಿನ ಬರುವುದಿಲ್ಲ ಎಂದಾಗ, ಜೆಡಿಎಸ್ ಬೋಜೇಗೌಡರು, ಕಾದು ನೋಡೋಣ ಎಂದರು. […]

ಚುನಾವಣಾ ವೆಚ್ಚಕ್ಕಾಗಿ ಸರ್ಕಾರದಿಂದ ಗುತ್ತಿಗೆ ಡೀಲ್ : ಕಾಂಗ್ರೆಸ್ ಹೊಸ ಬಾಂಬ್

ಬೆಂಗಳೂರು,ಫೆ.15- ನಿರ್ಗಮಿತ ಸರ್ಕಾರ ಚುನಾವಣೆ ವೆಚ್ಚಕ್ಕಾಗಿ ಹಣ ಸಂಗ್ರಹಿಸಲು ಅಕ್ರಮವಾಗಿ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದ್ದು, 10 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಹಣವನ್ನೂ ಲೂಟಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಮುಂದಿನ ದಿನಗಳಲ್ಲಿ ಇದನ್ನು ನಮ್ಮ ಸರ್ಕಾರ ತನಿಖೆಗೆ ಒಳಪಡಿಸಲಿದೆ ಎಂದು ಎಚ್ಚರಿಸಿದ್ದಾರೆ. ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ […]

ಫೆ.3ರಿಂದ ಕಾಂಗ್ರೆಸ್‍ನ 2ನೇ ಹಂತದ ಪ್ರಜಾಧ್ವನಿ ಯಾತ್ರೆ

ಬೆಂಗಳೂರು,ಜ.29- ಮೊದಲ ಹಂತದ ಪ್ರಜಾಧ್ವನಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ನಂತರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಇಬ್ಬರು ಪ್ರಮುಖ ನಾಯಕರು ತಂಡದೊಂದಿಗೆ ಫೆಬ್ರವರಿ 3ರಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಿಗದಿಯಂತೆ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕದ ಗಡಿ ಜಿಲ್ಲೆ ಬೀದರ್‍ನ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ, ಡಿ.ಕೆ.ಶಿವಕುಮಾರ್ ಕೋಲಾರದ ಮುಳಬಾಗಿಲು ಕ್ಷೇತ್ರದಿಂದ ಯಾತ್ರೆ ಆರಂಭಿಸಲಿದ್ದಾರೆ. ಈ ಎರಡು ಕ್ಷೇತ್ರಗಳು ಧಾರ್ಮಿಕ ನಂಬಿಕೆಗಳೊಂದಿಗೆ ಬೇರೆತಿದ್ದು, ಅಲ್ಲಿಂದಲೇ ಯಾತ್ರೆ ಆರಂಭಿಸುತ್ತಿರುವುದು ವಿಶೇಷವಾಗಿದೆ. ಮೊದಲ […]