ಪಾದಯಾತ್ರೆ ನಿಲ್ಲಿಸುವಂತೆ ಹೈಕಮಾಂಡ್ ಸೂಚನೆ

ಬೆಂಗಳೂರು, ಅ.13- ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ನಿಲ್ಲುಸುವ ಬಗ್ಗೆ ಪರಿಶೀಲನೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ. ಇಂದು ಬೆಳಗ್ಗೆ ಪಕ್ಷದ ವರಿಷ್ಠ ನಾಯಕ ರಾಹುಲ್‍ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದು, ನಂತರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್‍ಸಿಂಗ್ ಸುರ್ಜೇವಾಲ ಅವರೊಂದಿಗೆ ಚರ್ಚೆ ನಡೆಸಿದ್ದರು. ನಂತರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಹೈಕಮಾಂಡ್ ಸಮಾಲೋಚನೆ ನಡೆಸಿದೆ. ಪಾದಯಾತ್ರೆ ಆರಂಭದಿಂದ ಈವರೆಗೆನ ಹೋರಾಟ ಮತ್ತು ರಾಜಕೀಯ […]