“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ”
ಬೆಂಗಳೂರು, ಫೆ.9- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಸಚಿವ ಸುನಿಲ್‍ಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕವಾಗಿ ಇರಬೇಕೆನ್ನುವವರು ಕಾಂಗ್ರೆಸ್‍ಅನ್ನು ಬೆಂಬಲಿಸುತ್ತಾರೆ. ಎಸ್‍ಡಿಪಿಐ, ಪಿಎಫ್‍ಐ ಜತೆ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಆಪಾದಿಸಿದರು. ಸಮವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಹಿಜಾಬ್‍ಗೆ ಸಂಬಂಧಪಟ್ಟ ವಿಚಾರ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದ ಆದೇಶವನ್ನು ನಿರೀಕ್ಷಿಸಲಾಗುತ್ತಿದೆ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತಲೇ ಬಂದಿದ್ದೇವೆ. ಅದೇ ರೀತಿ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. […]