ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಶಿವಮೊಗ್ಗ, ಫೆ.27- ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗ ದಳ ಕಾರ್ಯಕರ್ತ ಹರ್ಷ ಅವರ ನಿವಾಸಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮತ್ತಿತರ ಮುಖಂಡರು ಹರ್ಷ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ಹೇಳಿದರು. ನಂತರ ಮಾತನಾಡಿದ ಅವರು, ಹರ್ಷನನ್ನು ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದರು.ಅವರ ಹತ್ಯೆಯನ್ನು ಯಾರೇ ಮಾಡಿರಲಿ ಅದನ್ನು ನಾವು ಖಂಡಿಸುತ್ತೇವೆ. ಇಂತಹ ಘಟನೆಗಳು […]