2ನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ 2.0

ಬೆಂಗಳೂರು,ಫೆ.28-ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿ ಕಾಂಗ್ರೆಸ್ ಕೈಗೊಂಡಿರುವ 2ನೇ ಹಂತದ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಬಿಡದಿಯಿಂದ ಕೆಂಗೇರಿವರೆಗೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆ ಮೂಲಕ ಸಾಗಿಬಂದರು. ಉರಿ ಬಿಸಿಲಿನಲ್ಲಿ ಕಾಂಗ್ರೆಸ್ ಮುಖಂಡರು ಹೆಜ್ಜೆ ಹಾಕುತ್ತಾ ನಮ್ಮ ನೀರು, ನಮ್ಮ ಹಕ್ಕು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಘೋಷಣೆಗಳನ್ನು ಕೂಗಿದರು. ರಾಮನಗರದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸಿಗರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್‍ನ ಶಕ್ತಿಪ್ರದರ್ಶನ ಮಾಡಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಇಂದು ತುಮಕೂರು ಜಿಲ್ಲೆಯಾದ್ಯಂತ […]