ಸೋಮವಾರದವರೆಗೂ ಅಹೋರಾತ್ರಿ ಧರಣಿಯ ಎಚ್ಚರಿಕೆ ಕೊಟ್ಟ ಕಾಂಗ್ರೆಸ್
ಬೆಂಗಳೂರು,ಫೆ.18-ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಕೈಗೆತ್ತಿಕೊಂಡಿರುವ ಕಾಂಗ್ರೆಸ್ ಸೋಮವಾರದವರೆಗೂ ವಿಧಾನಮಂಡಲದಲ್ಲಿ ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದೆ. ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒನ್ ಪಾಯಿಂಟ್ ಅಜೆಂಡಾ ಇಟ್ಟುಕೊಂಡು ಕಳೆದ ಮೂರು ದಿನಗಳಿಂದಲೂ ಕಾಂಗ್ರೆಸ್ ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ ಧರಣಿ, ಪ್ರತಿಭಟನೆ, ಸತ್ಯಾಗ್ರಹ ನಡೆಸುತ್ತಲೇ ಇದೆ. ಸರ್ಕಾರ ಕಾಂಗ್ರೆಸ್‍ನ […]