ಬಿಬಿಎಂಪಿ ವಾರ್ಡ್ ಮರುವಿಂಗಡಣೆಯಲ್ಲಿ ಬಿಜೆಪಿಯಿಂದ ಅಧಿಕಾರ ದುರುಪಯೋಗ

ಬೆಂಗಳೂರು,ಫೆ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಬಾರಿ ಬೆಂಗಳೂರು ಪ್ರದಕ್ಷಿಣೆ ಹಾಕಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದರು. ಬಿಬಿಎಂಪಿ ವಾರ್ಡ್‍ಗಳ ಮರುವಿಂಗಡಣೆಯಲ್ಲಿ ಆಡಳಿತಾರೂಢ ಬಿಜೆಪಿಯ ಹಸ್ತಕ್ಷೇಪ ಮತ್ತು ಅಕಾರ ದುರುಪಯೋಗ ವಿರೋಧಿಸಿ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಬಿಎಂಪಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಂಟು ಜನ ಸಚಿವರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಉಸ್ತುವಾರಿಯಾಗಿದ್ದಾರೆ. ಆದರೆ ಬೆಂಗಳೂರು ಅಭಿವೃದ್ಧಿಯ ಯಾವುದೇ ಕೆಲಸಗಳಾಗಿಲ್ಲ. […]