ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಜ.3- ಮತಾಂತರ ನಿಷೇಧ ಕಾಯ್ದೆ ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ.  ಪ್ರತಿಭಟನೆಯಲ್ಲಿ ಶಾಸಕ ಹ್ಯಾರೀಸ್, ಹಿರಿಯ ವಕೀಲ ಹಾಗೂ ಕಾಂಗ್ರೆಸ್ ನಾಯಕ ಸಿ.ಎಸ್.ದ್ವಾರಕನಾಥ್,ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಬ್ದುಲ್ ಜಬ್ಬಾರ್ ಮತ್ತಿತರರು ಭಾಗವಹಿಸಿದ್ದರು. ಸಿ.ಎಸ್.ದ್ವಾರಕನಾಥ್ ಮಾತನಾಡಿ, ಉತ್ತರಪ್ರದೇಶದಲ್ಲಿ ಚುನಾವಣೆ ಇರುವ ಕಾರಣಕ್ಕಾಗಿ ದೇಶಾದ್ಯಂತ ಮತೀಯ ವಾದವನ್ನು ಹೆಚ್ಚು ಬಿಂಬಿಸಲಾಗುತ್ತಿದೆ. ಉತ್ತರಪ್ರದೇಶದಲ್ಲಿನ ಮತಾಂತರ ಕಾಯ್ದೆಯನ್ನೇ ಮಕ್ಕಿಕಾಮಕ್ಕಿ ಕರ್ನಾಟಕದಲ್ಲೂ ರೂಪಿಸಲಾಗಿದೆ. ನಾಗಪುರದ ಆರ್‍ಎಸ್‍ಎಸ್ ಕಚೇರಿಯಲ್ಲಿ ಮಸೂದೆ ತಯಾರಿಯಾದಂತಿದೆ ಎಂದು […]