“ಒಳಜಗಳ ಮುಚ್ಚಿಕೊಳ್ಳಲು ಕಾಂಗ್ರೆಸ್ ಪ್ರತಿಭಟನೆ”
ಬೆಂಗಳೂರು,ಫೆ,17- ಕಾಂಗ್ರೆಸ್ ನಾಯಕರಲ್ಲಿರುವ ಆಂತರಿಕ ಒಳಜಗಳವನ್ನು ಮುಚ್ಚಿಕೊಳ್ಳಲು ಒಗ್ಗಟ್ಟು ಪ್ರದರ್ಶನಕ್ಕಾಗಿ ಸದನ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸದನದ ಕಾರ್ಯ- ಕಲಾಪಕ್ಕೆ ಅಡ್ಡಿಪಡಿಸಿ ಸದನದ ಸಮಯವನ್ನು ವ್ಯರ್ಥ ಮಾಡುವ ಮೂಲಕ ಮತ್ತಷ್ಟು ದುರ್ಬಲವಾಗಲಿದೆ. ಅದರಿಂದ ಕಾಂಗ್ರೆಸ್ ಬಲ ವೃದ್ಧಿಯಾಗುವುದಿಲ್ಲ. ಹಿಜಾಬ್ ವಿಚಾರ ಕಾಂಗ್ರೆಸ್‍ಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದು, ಅದನ್ನು ಡೈವರ್ಟ್ ಮಾಡಲು ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಈಶ್ವರಪ್ಪ ಅವರು ರಾಷ್ಟ್ರದ ಬಗ್ಗೆ […]
ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು,ಫೆ.17-ರಾಷ್ಟ್ರ ಧ್ವಜ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ವಿಧಾನಸಭೆಯಲ್ಲಿ ತನ್ನ ಪ್ರತಿಭಟನೆಯನ್ನು ಮುಂದುವರೆಸಿದೆ. ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‍ನ ಎಲ್ಲಾ ಸದಸ್ಯರು ಸದನದ ಬಾವಿಗಿಳಿದು ತಮ್ಮ ಪ್ರತಿಭಟನೆ ಮುಂದುವರೆಸಿ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ದೇಶ ದ್ರೋಹಿ ಬಿಜೆಪಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ರಾಜೀನಾಮೆ ನೀಡಬೇಕು. ನಮಗೆ ನ್ಯಾಯ ಬೇಕು. 40 ಪರ್ಸೆಂಟ್ […]