ಈಶ್ವರಪ್ಪ ತಲೆದಂಡಕ್ಕೆ ಕಾಂಗ್ರೆಸ್ ಪಟ್ಟು
ಬೆಂಗಳೂರು,ಫೆ.19- ಸಚಿವ ಈಶ್ವರಪ್ಪ ಅವರ ವಿವಾದಿತ ಹೇಳಿಕೆ ಖಂಡಿಸಿ ಉಭಯ ಮಂಡಲದಲ್ಲಿ ಕಾಂಗ್ರೆಸ್ನ ಅಹೋರಾತ್ರಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದ್ದು, ಸಚಿವರ ತಲೆದಂಡದವರೆಗೂ ಕೊನೆಯಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಬುಧವಾರ ವಿಧಾನಮಂಡಲದಲ್ಲಿ ವಿಷಯ ಪ್ರಸ್ತಾಪಿಸಿರುವ ಕಾಂಗ್ರೆಸ್ ಸದಸ್ಯರು ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು. ಅವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ನ ಒತ್ತಡಕ್ಕೆ ಸೊಪ್ಪು ಹಾಕಿಲ್ಲ. ಹೀಗಾಗಿ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಇಂದು ಮತ್ತು ನಾಳೆ […]