ಲಖನ್ ಜಾರಕಿಹೊಳಿಗೆ ಕಾಂಗ್ರೆಸ್ ಗಾಳ

ಬೆಂಗಳೂರು, ಜ.22- ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾಗಿರುವ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ನತ್ತ ಸೆಳೆಯುವ ಪ್ರಯತ್ನಗಳು ನಡೆಯುತ್ತಿದೆ. ಈ ವಿಷಯದಲ್ಲಿ ಕೈ ಪಾಳೇಯದಲ್ಲೇ ಹಗ್ಗಜಗ್ಗಾಟವೂ ಶುರುವಾಗಿದ್ದು, ಹಲವು ಲೆಕ್ಕಾಚಾರಗಳು ನಡೆದಿವೆ. ಕಳೆದ ಡಿಸೆಂಬರ್ನಲ್ಲಿ ನಡೆದ 25 ಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ತಲಾ 11 ಸ್ಥಾನಗಳನ್ನು ಹಂಚಿಕೊಂಡಿವೆ, ಜೆಡಿಎಸ್ ಎರಡು ಮತ್ತು ಒಂದರಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಲಖನ್ ಗೆಲುವು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಹಾಗೇ ಕಾಂಗ್ರೆಸ್ಗೆ […]