ಐಕ್ಯತಾ ಯಾತ್ರೆಗೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿಯನ್ನು ಕಟ್ಟಿಹಾಕಲು ಕಾಂಗ್ರಸ್ ತಯಾರಿ

ಬೆಂಗಳೂರು,ಸೆ.26-ರಾಹುಲ್ ಗಾಂಧಿ ಯವರ ಭಾರತ ಐಕ್ಯತಾ ಯಾತ್ರೆಗೆ ಪ್ರತಿಯಾಗಿ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಟಿಗಳನ್ನು ನಡೆಸಲು ಮುಂದಾಗಿರುವ ಬಿಜೆಪಿಗೆ ಮುಂದಿನ ದಿನಗಳಲ್ಲಿ ತಿರುಗೇಟು ನೀಡಲು ಕಾಂಗ್ರೆಸ್ ತಯಾರಿ ನಡೆಸಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 350 ಕಿ.ಮೀ ಉದ್ದದ ಪಾದಯಾತ್ರೆಯನ್ನು ರಾಹುಲ್ ಗಾಂ ಹಮ್ಮಿಕೊಂಡಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ, ಅಗತ್ಯವಸ್ತುಗಳ ಮೇಲೆ ಜಿಎಸ್ಟಿ ಹೇರಿಕೆ, ಕೋಮುಗಲಭೆಗಳು ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಭಾರತ ಐಕ್ಯತಾ ಯಾತ್ರೆ ನಡೆಯುತ್ತಿದೆ. ಇದುವರೆಗೂ ತಮಿಳುನಾಡಿನಲ್ಲಿ ಯಾತ್ರೆ ಸುಗಮವಾಗಿ ನಡೆದಿದ್ದು, ಕೇರಳದಲ್ಲಿ ನಾನಾ ಜಿಲ್ಲೆಗಳನ್ನು ಹಾದು ಸೆ.30ರಂದು […]