ಕಾಂಗ್ರೆಸ್ ಪಾದಯಾತ್ರೆಯಿಂದ ಟ್ರಾಫಿಕ್ ಕಿರಿಕಿರಿ, ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಮಾ.3- ಕಾಂಗ್ರೆಸ್‍ನ ಪಾದಯಾತ್ರೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ನಗರದಲ್ಲಿ ಇನ್ನು ಮುಂದೆ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ. ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆಯಿಂದ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಅನುಭವಿಸಿದ ತೊಂದರೆ, ಸ್ವತಃ ನ್ಯಾಯಾಧೀಶರೇ ಟ್ರಾಫಿಕ್‍ಜಾಮ್‍ನಲ್ಲಿ ಸಿಲುಕಿ ನ್ಯಾಯಾಲಯಕ್ಕೆ ತಡವಾಗಿ ಬರಬೇಕಾದ ಪರಿಸ್ಥಿತಿ ಉಂಟಾಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ನ್ಯಾಯಾಲಯ ಇನ್ನು ಮುಂದೆ ನಗರದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ. […]

ಮೇಕೆದಾಟು ಪಾದಯಾತ್ರೆ ಯಶಸ್ವಿಗೆ ಕೈ ಪಡೆ ಅಂತಿಮ ತಯಾರಿ

ಬೆಂಗಳೂರು,ಜ.8- ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಡ ಹೇರಲು ಕಾಂಗ್ರೆಸ್ ಹಮ್ಮಿಕೊಂಡಿರುವ ನೀರಿಗಾಗಿ ನಡಿಗೆ ಐತಿಹಾಸಿಕ ಪಾದಯಾತ್ರೆ ನಾಳೆಯಿಂದ ಆರಂಭವಾಗಲಿದೆ.ಹಳೆ ಮೈಸೂರು ಭಾಗಗಳಿಂದ ಸಾವಿರಾರು ಕಾರ್ಯಕರ್ತರು ಈಗಾಗಲೇ ಕನಕಪುರ, ರಾಮನಗರದಲ್ಲಿ ಜಮಾವಣೆಗೊಂಡಿದ್ದಾರೆ. ವೀಕೆಂಡ್ ಕಫ್ರ್ಯೂ ಜಾರಿಯಲ್ಲಿದ್ದರೂ ನೀರಿಗಾಗಿ ನಡಿಗೆ ಕಾರ್ಯಕ್ರಮ ನಿರ್ವಿಗ್ನವಾಗಿ ನಡೆಯಲಿದೆ ಎಂದು ಕಾಂಗ್ರೆಸ್ ವಿಶ್ವಾಸ ಹೊಂದಿದೆ.ಪಾದಯಾತ್ರೆಗೆ ಸರ್ಕಾರದಿಂದ ತೀವ್ರ ವಿರೋಧ ವ್ಯಕ್ತಯಾಗುವ ಮಾತುಗಳು ಆರಂಭದಿಂದಲೂ ಕೇಳಿ ಬಂದಿದ್ದವು. ಆದರೆ, ಕ್ರಮೇಣ ಲಭ್ಯವಾಗುತ್ತಿರುವ ಮುನ್ಸೂಚನೆಗಳು ನೀರಿಗಾಗಿ ನಡೆ ಕಾರ್ಯಕ್ರಮಕ್ಕೆ ಹೆಚ್ಚಿನ ಅಡ್ಡಿ ಪಡಿಸದೆ ನಿಯಮ ಉಲ್ಲಂಘನೆ […]