ಕಾಂಗ್ರೆಸ್‍ನಲ್ಲಿ 2 ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಇಲ್ಲ: ಡಿಕೆಶಿ

ಬೆಂಗಳೂರು,ಜ.20- ಕಾಂಗ್ರೆಸ್‍ನಲ್ಲಿ ಒಬ್ಬರಿಗೆ ಒಂದೇ ಕ್ಷೇತ್ರ, ಎರಡು ಕಡೆ ಸ್ಪರ್ಧೆ ಮಾಡಲು ಅವಕಾಶ ಕೇಳಿ ಯಾರು ಅರ್ಜಿ ಸಲ್ಲಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ನೆಲಮಂಗಲ ನಗರಸಭೆಯ ಹಲವು ಪ್ರಮುಖ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಹಲವು ಭ್ರಷ್ಟಚಾರಗಳು ಪ್ರತಿದಿನ ಹೊರ ಬರುತ್ತಿವೆ. ಅದರಿಂದ ಬೇಸತ್ತ ಜನ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇದೆ ಎಂದು ಸೇರ್ಪಡೆಯಾಗುತ್ತಿದ್ದಾರೆ. ಎಲ್ಲರೂ ಬೇಷರತ್ ಆಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದರು. […]

ವಿಧಾನಸಭೆ ಚುನಾವಣೆ : ಆಕಾಂಕ್ಷಿಗಳಿಂದ ಆಂತರಿಕ ಸಮೀಕ್ಷೆ

ಬೆಂಗಳೂರು,ಡಿ.1- ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆ ಮತದಾರರ ನಾಡಿಮಿಡಿತ ಅರಿಯಲು ಆಕಾಂಕ್ಷಿ ಅಭ್ಯರ್ಥಿಗಳು ಸಮೀಕ್ಷೆಯ ಮೊರೆ ಹೋಗಿದ್ದಾರೆ. ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಗೆಲುವಿನ ಕುರಿತು ಖಾಸಗಿ ಏಜೆನ್ಸಿಗಳಿಂದ ಸದ್ದಿಲ್ಲದೆ ಸಮೀಕ್ಷೆ ನಡೆಸುತ್ತಿದ್ದಾರೆ. ಹಾಲಿ ಸಚಿವರಿಂದ ಹಿಡಿದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರಿಂದ ಹಿಡಿದು ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿರುವ ಸಂಭವನೀಯ ಅಭ್ಯರ್ಥಿಗಳು ಮತದಾರರಿಂದ ಲಾಭ-ನಷ್ಟದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದಾರೆ. ಖಾಸಗಿ ಏಜೆನ್ಸಿಗಳ ಮೂಲಕ ಕ್ಷೇತ್ರಗಳಲ್ಲಿನ […]

ಕಾಂಗ್ರೆಸ್‍ನ ಪ್ರಭಾವಿ ನಾಯಕರ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ ಬಿಜೆಪಿ

ಬೆಂಗಳೂರು,ನ.15- ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಕಾಂಗ್ರೆಸ್‍ನ 15 ಪ್ರಭಾವಿ ನಾಯಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಈ ಕ್ಷೇತ್ರಗಳಿಗೆ ಸಮಬಲ ಸ್ಪರ್ಧೆ ನೀಡುವ ಅಭ್ಯರ್ಥಿಗಳು ಸಂಪನ್ಮೂಲ, ಚುನಾವಣಾ ತಂತ್ರ, ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಚಾರ ನಡೆಸುವ ಮೂಲಕ ಕ್ಷೇತ್ರದಲ್ಲೇ ಕಟ್ಟಿ ಹಾಕುವ ರಣತಂತ್ರವನ್ನು ಬಿಜೆಪಿ ಹೆಣೆದಿದೆ. ಈ ಕ್ಷೇತ್ರಗಳಲ್ಲಿ ಖುದ್ದು ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ […]