ದಿಕ್ಕು ಕಾಣದ ರಾಜಕಾರಣಿ ಸಿದ್ದರಾಮಯ್ಯ :ಆಶೋಕ್ ಟೀಕೆ

ಬೆಂಗಳೂರು, ಜ.12- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ರೀತಿ ದಿಕ್ಕು ಕಾಣದಿರುವ ರಾಜಕಾರಣಿ ಎಂದು ಟೀಕಿಸಿರುವ ಕಂದಾಯ ಸಚಿವ ಆರ್.ಅಶೋಕ್ ಅವರು, ಬಾದಾಮಿ ಕ್ಷೇತ್ರ ದಂತೆ ಕೋಲಾರ ಕ್ಷೇತ್ರದಲ್ಲೂ ಓಡಿಸುತ್ತಾರೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದರು. ಬಾದಾಮಿಯಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದರೆ, ಜನರು ಯಾಕೆ ಓಡಿಸುತ್ತಿದ್ದರು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಮುಖಂಡ ಚಿಮ್ಮನಕಟ್ಟಿ ಅವರು, ವೇದಿಕೆ ಮೇಲೆಯೇ ಮೋಸ ಮಾಡಿದರು ಅಂತಾ ಹೇಳಿ ದರು. ಚಿಮ್ಮನ […]

ರಾಜಾಜಿನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಾರಾಮಾರಿ

ಬೆಂಗಳೂರು,ಡಿ.31- ರಾಜಾಜೀನಗರ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಕೆಲ ಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಮುಂದಿನ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಹಲವು ನಾಯಕರ ನೇತೃತ್ವದಲ್ಲಿ ಸಮಿತಿಗಳನ್ನು ರಚನೆ ಮಾಡಿದೆ. ಆ ಸಮಿತಿಗಳು ಸಭೆ ನಡೆಸಿ ನಾಳೆಯೊಳಗೆ ಪ್ರತಿಕ್ಷೇತ್ರಕ್ಕೆ ಮೂವರು ಪ್ರಬಲ ಆಕಾಂಕ್ಷಿಗಳ ಹೆಸರನ್ನು ಸೂಚಿಸಬೇಕಿದೆ. ಅದರ ಪ್ರಕಾರ ಬೆಂಗಳೂರು ನಗರದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸರಣಿ ಸಭೆಗಳು ನಡೆಯುತ್ತಿವೆ. ಇಂದು ರಾಜಾಜೀನಗರ ಕ್ಷೇತ್ರದ […]

ಚುನಾವಣೆಯಲ್ಲಿ ಗೆಲವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬೆಂಗಳೂರು, ನ.16- ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ಮಾಡಿದ್ದಾರೆ. ಸಿದ್ದರಾಮಯ್ಯ ಪ್ರಭಾವಿ ನಾಯಕರು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ […]

ಹಿತಶತ್ರುಗಳ ಕಾಟದಿಂದ ಎಚ್ಚರಿಕೆ ಹೆಜ್ಜೆ ಇಡುತ್ತಿರುವ ಸಿದ್ದರಾಮಯ್ಯ

ಬೆಂಗಳೂರು, ನ.14- ಕಳೆದ ಬಾರಿಯಂತೆ ಎರಡು ಕಡೆಗಳಲ್ಲಿ ಸ್ರ್ಪಧಿಸಲು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇಲ್ಲದಿರುವುದರಿಂದ, ಅವರು ಅತ್ಯಂತ ಸೂಕ್ಷ್ಮವಾಗಿ ಕ್ಷೇತ್ರ ಆಯ್ದುಕೊಳ್ಳಲು ಪೂರ್ವ ತಯಾರಿ ನಡೆಸಿದ್ದಾರೆ. ನಿನ್ನೆ ಕೋಲಾರಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಆರಂಭದಲ್ಲಿ ಅಲ್ಲಿಂದಲೇ ಸ್ರ್ಪಧಿಸುವ ಸುಳಿವು ನೀಡಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ತಾವಿನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳುವ ಮೂಲಕ ಗೊಂದಲ ಮೂಡಿಸಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಆಯ್ಕೆಯಲ್ಲಿ ಗೊಂದಲಕ್ಕೆ ಒಳಗಾಗಿರುವ ಕುರಿತು ರಾಜಕೀಯ ವಿರೋಧಿಗಳು ಕುಹಕವಾಡಲಾರಂಭಿಸಿದ್ದಾರೆ. ಮೂಲತಃ ಮೈಸೂರು […]

ಮುಂಬರುವ ಚುನಾವಣೆಯಲ್ಲಿ ಕೋಲಾರದಿಂದ ಸಿದ್ದರಾಮಯ್ಯ ಕಣಕ್ಕೆ

ಬೆಂಗಳೂರು, ನ.13- ಮುಂದಿನ ವಿಧಾನಸಭೆ ಚುನಾವಣೆಗೆ ಕೋಲಾರದಿಂದಲೇ ಕಣಕ್ಕಿಳಿಯುವ ಮುನ್ಸೂಚನೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕು ಗೊಳ್ಳುತ್ತಿದ್ದು,ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ರ್ಪಧಿಸುತ್ತಾರೆ ಎಂಬ ಕುತೂಹಲ ಹೆಚ್ಚಾಗಿತ್ತು. ಇಂದು ಅದಕ್ಕೆ ಬಹುತೇಕ ತೆರೆ ಬಿದಿದೆ. ಇಂದು ಬೆಳಗ್ಗೆ ಆಯ್ದ ನಾಯಕರೊಂದಿಗೆ ಕೋಲಾರಕ್ಕೆ ತೆರಳಿದ್ದ ಸಿದ್ದರಾಮಯ್ಯ, ಮೆಥೋಡಿಸ್ಟ್ ಚರ್ಚ್ ಬಳಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವಾಗ ಮತ್ತೊಮ್ಮೆ ಕೋಲಾರಕ್ಕೆ ಬರುತ್ತೇನೆ ಎಂದು ಹೇಳುವ […]

ಸಿದ್ದರಾಮಯ್ಯನವರೇ ನಿಮ್ಮ ಕ್ಷೇತ್ರ ಅಂತಿಮಗೊಳಿಸಿ : ಸಿಎಂ ಬೊಮ್ಮಾಯಿ

ಬೆಂಗಳೂರು,ನ.8- ನೀವು ಅಧಿಕಾರಕ್ಕೆ ಬರುವುದರ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿಮಗಾಗಿ ಒಂದು ಕ್ಷೇತ್ರವನ್ನು ಮೊದಲು ಅಂತಿಮಗೊಳಿಸಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಬಗ್ಗೆ ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದಾರೆ. ನೀವೆಲ್ಲೇ ಸ್ರ್ಪಧಿಸಿದರೂ ಪರಮೇಶ್ವರ್, ಖರ್ಗೆ, ಡಿಕೆಶಿ ನಿಮಗೆ ಖೆಡ್ಡಾ ತೋಡುವುದು ಖಚಿತ ಎಂದು ಎಚ್ಚರಿಸಿದ್ದಾರೆ. ಕಾಂಗ್ರೆಸ್ಸಿನ ಎವರ್ ಗ್ರೀನ್ ಬಾಲಕ ಬಾಲಕ ರಾಹುಲ್ ಗಾಂಧಿ ಅವರನ್ನು ಒಗ್ಗೂಡಿಸಲು […]

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ವಿದ್ಯುತ್ ಚಾಲಿತ ದ್ವಿಚಕ್ರವಾಹನ

ಬೆಂಗಳೂರು,ಸೆ.16- ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ ಬಾಬು ಜಗಜೀವನರಾಮ್ ಅವರ ಹೆಸರಿನಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ , ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ಇದನ್ನೂ ಓದಿ : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ […]

ಜಿ.ಪಂ, ತಾ.ಪಂ ಕ್ಷೇತ್ರ ಪುನರ್ ವಿಂಗಡಣೆಗೆ ಸುಗ್ರೀವಾಜ್ಞೆ

ಬೆಂಗಳೂರು,ಆ.24-ಬಹುನಿರೀಕ್ಷಿತ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಕ್ಷೇತ್ರಗಳ ಜನಸಂಖ್ಯೆ ನಿಗದಿಪಡಿಸುವ ಸಂಬಂಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಸರ್ಕಾರದ ಈ ಕ್ರಮದಿಂದಾಗಿ ಈಗಾಗಲೇ ಸಾಕಷ್ಟು ವಿಳಂಬವಾಗಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಇನ್ನಷ್ಟು ವಿಳಂಬವಾಗುವುದು ಬಹುತೇಕ ಖಚಿತವಾಗಿದೆ. ಸುಗ್ರಿವಾಜ್ಞೆಯ ಪ್ರಕಾರ ತಾ.ಪಂ. ಹಾಗೂ ಜಿ.ಪಂ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಲಿದೆ. ಇದು ಮುಂದೆ ಕ್ಷೇತ್ರ ಪುನರ್‍ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಇನ್ನಷ್ಟು […]

ಚಿಕ್ಕಮಗಳೂರಿನಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆಹ್ವಾನ

ಚಿಕ್ಕಮಗಳೂರು, ಆ.5- ಕಾಫಿ ನಾಡು ಚಿಕ್ಕಮಗಳೂರು ಕ್ಷೇತ್ರದಿಂದ ಸ್ರ್ಪಧಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಆಹ್ವಾನ ನೀಡಿದರು. ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಲವಾರು ಕ್ಷೇತ್ರಗಳಿಂದ ಸ್ರ್ಪಧಿಸುವಂತೆ ಆಹ್ವಾನ ಬರುತ್ತಿದ್ದು, ಈಗ ಚಿಕ್ಕಮಗಳೂರಿನಿಂದ ಸ್ರ್ಪಧಿಸುವಂತೆ ಸಚಿನ್ ಮಿಗಾ ಆಹ್ವಾನ ನೀಡಿದ್ದಾರೆ. ಮೊನ್ನೆ ದಾವಣಗೆರೆಯಲ್ಲಿ ನಡೆದ ಅಮೃತ ಮಹೋತ್ಸವ ಸಮಾರಂಭದ ಸಂದರ್ಭದಲ್ಲಿ ಅವರು ಈ ಸಂಬಂಧ […]