ಕನ್ಸೆಲ್ಟೆನ್ಸಿ ಆಧಾರದಲ್ಲಿ ಹಿರಿಯರ ನೇಮಕ : ಸಿಎಂ ಬೊಮ್ಮಾಯಿ
ಬೆಂಗಳೂರು,ಅ.1- ಹಿರಿಯರ ಅನುಭವಗಳು ಇಂದಿನ ನಾಗರಿಕ ಸಮಾಜಕ್ಕೆ ಅತ್ಯಗತ್ಯವಾಗಿದ್ದು, ಕನ್ಸೆಲ್ಟೆನ್ಸಿ ಆಧಾರದಲ್ಲಿ ಅವರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ತಿಳಿಸಿದ್ದಾರೆ.ವಿಕಲಚೇತನರು, ಹಿರಿಯ ನಾಗರಿಕರ ನಿರ್ದೇಶನಾಲಯದಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಹಿರಿಯರ ಸಲಹೆಗಳು, ಸೂಚನೆಗಳು, ಮಾರ್ಗದರ್ಶನ ಮುಂದಿನ ಪೀಳಿಗೆಗೂ ಅಗತ್ಯ. ಹೀಗಾಗಿ ಅವರನ್ನು ಕನ್ಸೆಲ್ಟೆನ್ಸಿ ಆಧಾರದಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುತ್ತೇವೆ. ಅವರ ಅನುಭವಕ್ಕೆ ತಕ್ಕಂತೆ ಕೆಲಸ ಮಾಡಲಿ ಎಂದು ಹೇಳಿದರು. ಹಿರಿಯರನ್ನು ಕೆಲಸಕ್ಕೆ ತೆಗೆದುಕೊಂಡ […]