ಅಮಿತ್ ಷಾ ಸೂಚನೆ ನಡುವೆಯೂ ಮಹಾಮೇಳಾವಕ್ಕೆ ಸಜ್ಜಾದ ಎಂಇಎಸ್

ಬೆಂಗಳೂರುಮ ಡಿ.16- ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನವರೆಗೆ ಕಾಯುವಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸೂಚನೆ ನೀಡಿದ್ದರೂ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವ ನಡೆಸಲು ನಿರ್ಧರಿಸಿದೆ. ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲ ಅಧಿವೇಶನ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಪ್ರತಿಯಾಗಿ ಎಂಇಎಸ್ ಮಹಾಮೇಳಾವವನ್ನು ನಡೆಸುತ್ತಿದೆ. ಈ ಮಹಾಮೇಳಾವದಲ್ಲಿ ಕರ್ನಾಟಕದ ಹಲವಾರು ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಲಾಗುತ್ತದೆ. ಬೆಳಗಾವಿ, ನಿಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸೇರಿದಂತೆ ಗಡಿಭಾಗದಲ್ಲಿರುವ […]