ವಿಧಾನಸಭೆಯಲ್ಲಿ ಕುಕ್ಕರ್ ಗದ್ದಲ

ಬೆಳಗಾವಿ,ಡಿ.22-ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಕುರಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ ಹೇಳಿಕೆಗೆ ಕುರಿತಂತೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ ಮಾತಿನ ಚಕಮಕಿ ನಡೆಯಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಸಿ.ಟಿ.ರವಿ ಅವರು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಈ ಸದನದ ಹಿರಿಯ ಸದಸ್ಯರೊಬ್ಬರು ಹಾಗೂ ರಾಷ್ಟ್ರೀಯ ಪಕ್ಷದ ಅಧ್ಯಕ್ಷರೊಬ್ಬರು ಲಘುವಾಗಿ ಮಾತನಾಡಿ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವಂತಹ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಇದು ಭಯೋತ್ಪಾದನೆ […]

ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ಥರನ್ನು ಮರೆತ ಸರ್ಕಾರ : ಕಾಂಗ್ರೆಸ್ ಕಿಡಿ

ಬೆಂಗಳೂರು,ಡಿ.21- ಕುಕ್ಕರ್ ಬಾಂಬ್ ಪ್ರಕರಣದಲ್ಲಿ ರಾಜಕೀಯ ಲಾಭದ ಲೆಕ್ಕಾಚಾರ ಹಾಕುತ್ತಾಕುಳಿತಿರುವ ಸರ್ಕಾರ ಸಂತ್ರಸ್ಥರನ್ನು ಮರೆತು ರಾಜಕಾರಣದಲ್ಲಿ ಕಾಲ ಕಳೆಯುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.ನವೆಂಬರ್ 19ರಂದು ನಡೆದಿದ್ದ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ಆಟೋ ಚಾಲಕನಿಗೆ 5 ಲಕ್ಷ ಪರಿಹಾರ ಕೊಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದೆ. ಮಂಗಳೂರು ಸ್ಪೋಟದಿಂದ ಕಾನೂನು ಸುವ್ಯವಸ್ಥೆ ಹಾಗೂ ಗುಪ್ತಚರ ವೈಫಲ್ಯ ಬಯಲಾಗಿದೆ. ಈಗ ಸಂತ್ರಸ್ಥರೊಂದಿಗಿನ ಸರ್ಕಾರದ ನಿರ್ಲಕ್ಷ್ಯವೂ ಬಯಲಾಗಿದೆ. ಗೃಹ ಸಚಿವ ಅರಗಜ್ಞಾನೇಂದ್ರ ಅವರು ಎಲ್ಲವನ್ನೂ ರಾಜಕೀಯ ಲಾಭದಿಂದಲೇ ನೋಡುತ್ತಿದ್ದಾರೆ […]

ಕುಕ್ಕರ್ ಬಾಂಬ್ ಪ್ರಕರಣ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್

ಬೆಂಗಳೂರು,ಡಿ.16- ಕುಕ್ಕರ್ ಬಾಂಬ್ ಪ್ರಕರಣವನ್ನು ಬಿಜೆಪಿ ರಾಜಕೀಯ ಕಾರಣಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದರ ಮರೆಯಲ್ಲಿ ಮತದಾರರ ಪಟ್ಟಿ ಅಕ್ರಮ ಸೇರಿದಂತೆ ಹಲವಾರು ಅವ್ಯವಹಾರಗಳನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಪುನರುಚ್ಚರಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಭಯೋತ್ಪಾದನೆ ಪರವಾಗಿಲ್ಲ. ಭಯೋತ್ಪಾದನೆಯಿಂದ ಕಾಂಗ್ರೆಸ್ ನಾಯಕರುಗಳನ್ನು ಕಳೆದುಕೊಂಡಿದೆ. ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ದೇಶದ ಐಕ್ಯತೆ, ಸಮಗ್ರತೆ ವಿಷಯಕ್ಕೆ ನಾವು ಸದಾ ಬದ್ಧ. ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದರು. ಮಂಗಳೂರು ಕುಕ್ಕರ್ […]