ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ರಣತಂತ್ರ

ಬೆಂಗಳೂರು,ಜ.18- ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ಕುರಿತು ಈಗಾಗಲೇ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದೇವೆ. ನಮ್ಮ ಕಾರ್ಯಕರ್ತರು, ಮುಖಂಡರು ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಒತ್ತಾಯಿಸಲಿದ್ದಾರೆ. ನಾವು ಈ ವಿಷಯದಲ್ಲಿ ಸುಮ್ಮನೆ ಕೂರುವುದಿಲ್ಲ ಎಂದರು. ಬಿಜೆಪಿ ಕಾರ್ಯಕರ್ತರು, ಮುಖಂಡರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದಾಗ ಯಾವುದೇ ಕ್ರಮ ಕೈಗೊಂಡಿಲ್ಲ. ಜನರಿಗಾಗಿ ಪಾದಯಾತ್ರೆ […]