ಮೈಸೂರಿನಲ್ಲಿ ಇಂದಿನಿಂದ ಶಾಲೆಗಳು ಬಂದ್

ಮೈಸೂರು,ಜ.12- ಜಿಲ್ಲೆಯಲ್ಲಿ ಹೆಚ್ಚಿನ ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಮತ್ತು ತಾಲೂಕಿನಲ್ಲಿ ಅಂಗನವಾಡಿಯಿಂದ 10ನೇ ತರಗತಿಯವರೆಗಿನ ಭೌತಿಕ ತರಗತಿಗಳನ್ನು ಇಂದಿನಿಂದ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ. ಈ ಅವಧಿಯಲ್ಲಿ ಆನ್‍ಲೈನ್ ತರಗತಿಗಳನ್ನು ನಡೆಸಲು ಸೂಚಿಸಿದ್ದಾರೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಒಟ್ಟು 138 ಮಕ್ಕಳು ಸೋಂಕಿತರಾಗಿದ್ದಾರೆ. ಮಂಗಳವಾರ 562 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,868ಕ್ಕೆ ಹೆಚ್ಚಿದೆ. ಇದೇ ರೀತಿ ಇನ್ನೂ ಹಲವು ಜಿಲ್ಲೆಗಳಲ್ಲಿ ಮುಚ್ಚಲು ಚಿಂತನೆ ನಡೆಸಲಾಗುತ್ತಿದೆ.

ಬೆಂಗಳೂರಿಗರೇ ಈ ವಾರ್ಡ್‍ಗಳಲ್ಲಿ ಓಡಾಡುವ ಮುನ್ನ ಹುಷಾರ್..!

ಬೆಂಗಳೂರು,ಜ.6-ನಗರದ ಈ ಹತ್ತು ವಾರ್ಡ್‍ಗಳಲ್ಲಿ ಸಂಚರಿಸುವ ಮುನ್ನ ಇರಲಿ ಎಚ್ಚರ… 198 ವಾರ್ಡ್‍ಗಳಲ್ಲಿ 10 ವಾರ್ಡ್‍ಗಳಲ್ಲಿ ಕೊರೊನಾ ಸೋಂಕು ಉಲ್ಬಣಗೊಂಡಿರುವುದರಿಂದ ನೀವು ವ್ಯಾಪಾರ ವಹಿವಾಟಿಗಾಗಿ ಈ ವಾರ್ಡ್‍ಗಳಿಗೆ ತೆರಳುವ ಮುನ್ನ ಸ್ವಲ್ಪ ಯೋಚಿಸಬೇಕಿದೆ. ಉದಾಸೀನ ಮಾಡಿದರೆ ನೀವು ಮಹಾಮಾರಿಯನ್ನು ಮನೆಗೆ ಕರೆದುಕೊಂಡು ಬರಬೇಕಾಗುತ್ತದೆ. ಹೀಗಾಗಿ ಇರಲಿ ಎಚ್ಚರ. ಹಾಗಾದ್ರೆ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವ ಆ 10 ವಾರ್ಡ್‍ಗಳು ಯಾವುದು ಎಂಬ ಮಾಹಿತಿ ಇಲ್ಲಿದೆ ನೋಡಿ. ಬೆಳ್ಳಂದೂರು, ದೊಡ್ಡನಕ್ಕುಂದಿ,, ಹಗದೂರು, ಎಚ್‍ಎಸ್‍ಆರ್ ಬಡಾವಣೆ, ವರ್ತೂರು, ಕೋರಮಂಗಲ, ನ್ಯೂ […]

ಜ.10ರಿಂದ ಹಿರಿಯ ನಾಗರಿಕರಿಗೆ ಬೂಸ್ಟರ್ ಲಸಿಕೆ

ಬೆಂಗಳೂರು,ಜ.5- ರಾಜ್ಯದಲ್ಲಿ ಕೋವಿಡ್ ಸೋಂಕು ಹಾಗೂ ಓಮಿಕ್ರಾನ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜ.10ರಿಂದ 60 ವರ್ಷ ಮೇಲ್ಪಟ್ಟವರು, ಮುಂಚೂಣಿ ವಾರಿಯರ್ಸ್, ಆರೋಗ್ಯ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ 3ನೇ ಹಂತದ ಲಸಿಕೆಯಾದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿರುವ ಹಿರಿಯ ನಾಗರಿಕರು, ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯರು, ದಾದಿಯರು, ಫ್ರಂಟ್‍ಲೈನ್ ವಾರಿಯರ್ಸ್‍ಗೆ ಬೂಸ್ಟರ್ ಡೋಸ್ ನೀಡಲಾಗುವುದು. ಅದೇ ರೀತಿ ದೀರ್ಘಕಾಲದ […]

ಮೆಟ್ರೋ ರೈಲು ಸಂಚಾರಕ್ಕೂ ಮಾರ್ಗಸೂಚಿ..?

ಬೆಂಗಳೂರು,ಜ.5-ನಗರದಲ್ಲಿ ಕೊರೊನಾ ಸ್ಪೋಟವಾಗಿರುವುದು ಮೆಟ್ರೋ ರೈಲು ಸಂಚಾರದ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ.ಮೆಟ್ರೋ ಸಂಚಾರಕ್ಕೆ ಹೊಸ ಮಾರ್ಗಸೂಚಿ ರಚನೆಯಾಗಲಿದ್ದು, ಇಂದು ಸಂಜೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ನೇತೃತ್ವದಲ್ಲಿ ಅಕಾರಿಗಳ ಸಭೆ ನಡೆಯಲಿದೆ. ಪ್ರತಿನಿತ್ಯ ಮೆಟ್ರೋ ರೈಲಿನಲ್ಲಿ 1900 ಪ್ರಯಾಣಿಕರು ಪ್ರಯಾಣಿಸಲು ಅವಕಾಶವಿದ್ದು, ಇದರ ಸಂಖ್ಯೆಯನ್ನು 900ಕ್ಕೆ ಕಡಿತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಟೋಕನ್ ಪಡೆದು ಮೆಟ್ರೋ ರೈಲು ಸಂಚಾರ ಮಾಡುವ ಅವಕಾಶ ಕೈ ಬಿಟ್ಟು ಕೇವಲ ಸ್ಮಾರ್ಟ್ ಕಾರ್ಡ್ […]

ಬೆಂಗಳೂರಲ್ಲಿ ಕೊರೊನಾ ಸ್ಪೋಟ, ಒಂದೇ ದಿನ 3605 ಮಂದಿಗೆ ಪಾಸಿಟಿವ್..!

ಬೆಂಗಳೂರು,ಜ.5-ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಪೋಟವಾಗಿದೆ. ಇಂದು ಒಂದೇ ದಿನ 3605 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ ನಗರದಲ್ಲಿ 2053 ಕೊರೊನಾ ಪ್ರಕರಣಗಳು ಪತ್ತೆಯಾಗಿತ್ತು. ನಿನ್ನೆಗಿಂತ ಇಂದು ಒಂದೇ ದಿನ 1552 ಹೆಚ್ಚಿನ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. 201 ದಿನಗಳ ಬಳಿಕ ನಗರದಲ್ಲಿ ನಿನ್ನೆ ಒಂದೇ ದಿನ 2053 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿತ್ತು. ಇದೀಗ ಮತ್ತೆ 1552ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿರುವುದರಿಂದ ಜನ ಮತ್ತೆ ಎಚ್ಚರಿಕೆವಹಿಸಬೇಕಿದೆ. ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ನಗರದಲ್ಲಿ […]

ಪಬ್, ಸಿನಿಮಾ, ಹೊಟೇಲ್ 50-50, ವೀಕೆಂಡ್ ಲಾಕ್‍ಡೌನ್?

ಬೆಂಗಳೂರು,ಜ.4- ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಬೇಕೆ ? ಬೇಡವೇ ಎಂಬುದು ಇಂದು ಸಂಜೆ ನಡೆಯಲಿರುವ ಮಹತ್ವದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ. ಶನಿವಾರ-ಭಾನುವಾರ ವಾರಾಂತ್ಯದ ಲಾಕ್‍ಡೌನ್, ಈಗಿರುವ ಕಫ್ರ್ಯೂ ಸಮಯವನ್ನು ವಿಸ್ತರಿಸುವುದು ಹಾಗೂ ರಾಜ್ಯದ ಗಡಿಭಾಗಗಳಲ್ಲಿ ಹೆಚ್ಚಿನ ಬಿಗಿ ಕ್ರಮ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕದೆ ಒಂದಿಷ್ಟು ಕಠಿಣ ನಿಯಮಗಳನ್ನು ರೂಪಿಸುವುದು ಸೇರಿದಂತೆ ಎಲ್ಲಾ ಸಾಧ್ಯ ಸಾಧ್ಯತೆಗಳನ್ನು ಸರ್ಕಾರ ಮುಕ್ತವಾಗಿಟ್ಟುಕೊಂಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ […]