ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕೊರೊನಾ ಮಾರ್ಗಸೂಚಿ

ಬೆಳಗಾವಿ,ಡಿ.26- ಚೀನಾ ಸೇರಿದಂತೆ ವಿಶ್ವದ ನಾನಾ ಭಾಗಗಳಲ್ಲಿ ಬಿಎಫ್-ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದರೂ ಸದ್ಯಕ್ಕೆ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಒಂದಿಷ್ಟು ಮಾರ್ಗಸೂಚಿಗಳನ್ನು ಜಾರಿಗೆ ತರಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇಲ್ಲಿನ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಸದ್ಯಕ್ಕೆ ಲಾಕ್‍ಡೌನ್ ಜಾರಿ ಮಾಡುವುದಾಗಲಿ, ಸಾರ್ವಜನಿಕರು, ಮಧ್ಯಮವರ್ಗದವರು, ಶ್ರಮಿಕರು ಮತ್ತಿತರರಿಗೆ ಆರ್ಥಿಕ ಚಟುವಟಿಕೆಗಳಿಗೆ ಕಡಿವಾಣ ಹಾಕದೆ ಕೋವಿಡ್ ನಿಯಮಗಳನ್ನು ಜಾರಿ […]
ಕೊರೊನಾ 4ನೇ ಅಲೆ ಎದುರಿಸುವ ಸಾಮರ್ಥ್ಯ ಬಿಬಿಎಂಪಿಗಿದೆಯೇ..?

ಬೆಂಗಳೂರು,ಡಿ.23- ಚೀನಾ ಮತ್ತಿತರ ದೇಶಗಳ ಗಂಭೀರತೆಯನ್ನು ಗಮನಿಸಿದರೆ ಮತ್ತೆ ಕೊರೊನಾ ನಾಲ್ಕನೆ ಅಲೆ ಅಪ್ಪಳಿಸುವ ಸಾಧ್ಯತೆಗಳಿವೆ. ಒಂದು ವೇಳೆ ಅಂತಹ ಸನ್ನಿವೇಶ ಎದುರಾದರೆ ಅಂತಹ ಪರಿಸ್ಥಿತಿಯನ್ನು ಎದುರಿಸಲು ಬಿಬಿಎಂಪಿಗೆ ಸಾಮಥ್ರ್ಯ ಇದೆಯೇ ಎಂಬ ಪ್ರಶ್ನೆ ಇದೀಗ ಎಲ್ಲರನ್ನು ಕಾಡುತ್ತಿದೆ. ಕೊರೊನಾ ಒಂದು ಮತ್ತು ಎರಡನೆ ಅಲೆ ಅರಂಭದಲ್ಲಿ ಎದುರಾಗಿದ್ದ ಸಮಸ್ಯೆಗಳನ್ನು ತಡೆಗಟ್ಟಲು ಬಿಬಿಎಂಪಿ ವಿಫಲವಾಗಿತ್ತು. ಹೀಗಾಗಿ ವಿನಾಶಕಾರಿ ಕೊರೊನಾ ನಾಲ್ಕನೆ ಅಲೆಯನ್ನು ಎದುರಿಸಲು ಪಾಲಿಕೆಗೆ ಸಾಧ್ಯವೆ ಎಂಬ ಅನುಮಾನ ಕಾಡುವುದು ಸಹಜವಾಗಿದೆ. ಮಾರಣಾಂತಿಕವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ಮೂರನೆ […]
ಬೆಂಗಳೂರು ವಿವಿ ಆವರಣದಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು,ಡಿ.23- ಚೀನಾದಲ್ಲಿ ಕೊರೊನಾ ಅಬ್ಬರಿಸುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೊರೊನಾ ವೈರಸ್ ಆತಂಕ ಹಿನ್ನೆಲೆಯಲ್ಲಿ ವಿವಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ವಿವಿ ಆವರಣ ಪ್ರವೇಶಿಸುವಂತೆ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ. ಮಾಸ್ಕ್ ಧರಿಸುವುದರ ಜತೆಗೆ ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಪಡೆದುಕೊಳ್ಳುವಂತೆಯೂ ಸೂಚಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ವಿದ್ಯಾರ್ಥಿ ಬಂಧನ ಒಂದು ವೇಳೆ ಕೊರೊನಾ ನಿಯಮ ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು […]