ಮಕ್ಕಳಿಗೂ ವಕ್ಕರಿಸುತ್ತಿರುವ ಕೊರೊನಾ..!

ಬೆಂಗಳೂರು,ಜ.4-ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯ ಆರಂಭಗೊಂಡಿರುವ ಬೆನ್ನಲ್ಲೆ 19 ವರ್ಷದೊಳಗಿನ ಹಲವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಿಂದ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ, ಆದರೂ ನಿನ್ನೆ ಒಂದೇ ದಿನ ರಾಜ್ಯಾದ್ಯಂತ ನೂರಾರು ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಗರಿಬೊಮ್ಮನಹಳ್ಳಿಯ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತ ಮಕ್ಕಳಿಂದ ಇನ್ನಿತರ ಹಲವಾರು ವಿದ್ಯಾರ್ಥಿಗಳಿಗೂ ಸೋಂಕು ತಗುಲಿರುವ ಆತಂಕ ಎದುರಾಗಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ 142 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು […]