ಭಾರತದಲ್ಲಿ 24 ಗಂಟೆಯಲ್ಲಿ ಬರೋಬ್ಬರಿ 1,17,100 ಮಂದಿಗೆ ಕೊರೋನಾ..!

ನವದೆಹಲಿ, ಜ.7- ಭಾರತದಲ್ಲಿ 214 ದಿನಗಳ ಬಳಿಕ ದೈನಿಕ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ಗಡಿ ದಾಟಿದ್ದು, ಒಟ್ಟು ಸೋಂಕಿತರ ಪ್ರಮಾಣ 3,52,26,386ಕ್ಕೆ ಹೆಚ್ಚಾಗಿದೆ. ಈ ನಡುವೆ ರೂಪಾಂತರಿ ಓಮಿಕ್ರಾನ್ ಪ್ರಕರಣಗಳಲ್ಲಿ ಕರ್ನಾಟಕ ಮೂರನೆ ಸ್ಥಾನಕ್ಕೆ ತಲುಪಿರುವುದು ಆತಂಕ ಮೂಡಿಸಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬೆಳಗ್ಗೆ ಬಿಡುಗಡೆ ಮಾಡಿರುವ ಅಂಕಿ ಸಂಖ್ಯೆಗಳ ಪ್ರಕಾರ ನಿನ್ನೆ ಒಂದೇ ದಿನ ದೇಶದಲ್ಲಿ 1,17,100 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ […]