ಸಾರಿಗೆ ನಿಗಮಗಳ ಸೋರಿಕೆ ತಪ್ಪಿಸಿ ಲಾಭ ಹೆಚ್ಚಿಸಿ: ಸಚಿವ ಶ್ರೀರಾಮುಲು

ಬೆಂಗಳೂರು,ಆ.3- ಸೋರಿಕೆ ಹಾಗು ನಷ್ಟದ ಪ್ರಮಾಣವನ್ನು ಹತೋಟಿಗೆ ತಂದು ನಿಗಮಗಳನ್ನು ಲಾಭದತ್ತ ಕೊಂಡೊಯ್ಯದಿದ್ದರೆ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಶಿಸ್ತುಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬಿಎಂಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಹಾಗೂ ಕೆಎಸ್‍ಆರ್‍ಟಿಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಸೋರಿಕೆ ಹಾಗೂ ನಷ್ಟ ತಡೆಗಟ್ಟುವ ಕುರಿತು ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಸಾರಿಗೆ ಸಂಸ್ಥೆ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ನಾಲ್ಕು […]