ಕಾರ್ಪೊರೇಟ್ ರಾಜ್ಯಗಳ ಕಬಂಧ ಬಾಹುಗಳಲ್ಲಿ ಭಾರತ : ಹೆಚ್‌ಡಿಕೆ
ಬೆಂಗಳೂರು, ಅ.3- ಕಾರ್ಪೊರೇಟ್ ರಾಜ್ಯದ ಕಬಂಧ ಬಾಹುಗಳಲ್ಲಿ ಭಾರತ ಸಿಕ್ಕಿಬಿದ್ದಿರುವುದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಜನರ ಅಸಹನೆ, ಬೇಗುದಿ ದಿನೇ ದಿನೆ ಹೆಚ್ಚುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಚ್ಚೆತ್ತು ಕೊಳ್ಳಲು ಇದು ಸಕಾಲ ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ಮಹಾ ಆಕ್ರೋಶಕ್ಕೆ ಕಾರಣವಾದರೂ ಅಚ್ಚರಿ ಇಲ್ಲ ಎಂದಿದ್ದಾರೆ. ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ ಎಂದು ಬಿಜೆಪಿಯ […]