ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ..?

ರಾಯಪುರ,ಫೆ.25- ಎಐಸಿಸಿ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿರುವ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ಛತ್ತಿಸ್‍ಗಡದ ರಾಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ 85ನೇ ಸರ್ವಸದಸ್ಯರ ಅಧಿವೇಶನದಲ್ಲಿ ಮಾತನಾಡಿರುವ ಅವರು, ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ವ್ಯತಿಗತ ಹಿತಾಸಕ್ತಿಗಳನ್ನು ಬದಿಗಿಟ್ಟು ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಇಡೀ ದೇಶ ಸವಾಲಿನ ಸಮಯವನ್ನು ಎದುರಿಸುತ್ತಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಂಘಟನೆಗಳು ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡು ಬುಡಮೇಲು ಮಾಡಿವೆ. ಕೆಲವು ಉದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟು […]