ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ

ಬೆಳಗಾವಿ, ಡಿ.20-ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯ ಹಿರಿಯ ಸದಸ್ಯ ಹಾಗೂ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು. ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ತಟಸ್ಥವಾಗಿದ್ದು, ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಸಚೇತಕ ವೈ.ಎನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹಾಜರಿದ್ದರು. ನಾಳೆ ಮೇಲ್ಮನೆಯಲ್ಲಿ ಚುನಾವಣೆ ಪ್ರಕ್ರಿಯೆ […]