ಹಾಸನ ಮಿಕ್ಸಿ ಸ್ಪೋಟ ಪ್ರಕರಣ, ಇಬ್ಬರ ವಿಚಾರಣೆ

ಹಾಸನ, ಡಿ.27- ನಗರದ ಕೊರಿಯರ್ ಕಚೇರಿಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅನುಮಾನ ಮೇರೆಗೆ ಇಬ್ಬರನ್ನು ಠಾಣೆಗೆ ಕರೆಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ಸ್ಪೋಟದ ಸ್ಥಳಕ್ಕೆ ಇಂದು ಬೆಳಗ್ಗೆ ಆಗಮಿಸಿದ ಎಸ್‍ಪಿ ಅವರು ಸ್ಥಳ ಪರಿಶೀಲನೆ ನಡೆಸಿ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ತಡರಾತ್ರಿ ಮೈಸೂರಿನ ಎಫ್‍ಎಸ್‍ಎಲ್ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ […]