ಪ್ರಾದೇಶಿಕ ಭಾಷೆಯಲ್ಲಿ ಕಾನೂನು ಶಿಕ್ಷಣ

ನವದೆಹಲಿ,ಅ.17- ಈ ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ಸ್ಥಳೀಯ ಭಾಷೆಗಳಲ್ಲಿ ವಿಷಯಗಳನ್ನು ಹೊಂದಿರುವ 75 ಉತ್ತಮ ಗುಣಮಟ್ಟದ ಪುಸ್ತಕಗಳನ್ನು ಹೊರತರಲಿದೆ. ಆಯಾ ರಾಜ್ಯಗಳ ಮಾತೃಭಾಷೆಯಲ್ಲಿ ಕಾನೂನು ಶಿಕ್ಷಣವನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಕಾನೂನು ಪದವಿ ತರಗತಿ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಈ ಪುಸ್ತಕಗಳನ್ನು ಬರೆಯುತ್ತಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪದವಿ ಕಾನೂನು ತರಗತಿಗಳ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆಗಳಲ್ಲಿ ಪುಸ್ತಕ ಪ್ರಕಟಿಸುವ ಕೆಲಸಗಳನ್ನು ಮಾಡುತ್ತಿದ್ದೇವೆ. ಈ ವರ್ಷಾಂತ್ಯಕ್ಕೆ ಪುಸ್ತಕಗಳು ಪ್ರಕಟವಾಗಲಿದೆ. ಮಾತೃಭಾಷೆಗಳಲ್ಲಿ ಕಾನೂನು ಶಿಕ್ಷಣ ಪಡೆಯಬೇಕೆಂಬ ಇಚ್ಛೆಯಿರುವ ವಿದ್ಯಾರ್ಥಿಗಳಿಗೆ […]

ವೃತ್ತಿಪರ ಕೋರ್ಸ್‍ಗಳ ಪ್ರವೇಶಾತಿ ದಾಖಲಾತಿ ಆನ್‍ಲೈನ್‍ನಲ್ಲಿ ಪರಿಶೀಲನೆ

ಬೆಂಗಳೂರು,ಜು.15- ವಿದ್ಯಾರ್ಥಿಗಳಿಗೆ ಉಂಟಾಗುತ್ತಿದ್ದ ಕಿರಿಕಿರಿಯನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರ ವೃತ್ತಿಪರ ಕೋರ್ಸ್‍ಗಳ ಪ್ರವೇಶಾತಿಯ ದಾಖಲಾತಿಗಳನ್ನು ಆನ್‍ಲೈನ್ ಮೂಲಕವೇ ಪರಿಶೀಲನೆ ನಡೆಸುವ ವಿನೂತನ ಸಾಫ್ಟ್‍ವೇರ್‍ನ್ನು ಅಭಿವೃದ್ಧಿಪಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದ್ದು, ಇನ್ನು ಮುಂದೆ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‍ಗಳಾದ ಎಂಬಿಬಿಎಸ್, ಇಂಜಿನಿಯರಿಂಗ್, ದಂತ ವೈದ್ಯಕೀಯ, ಕೃಷಿ ಸೇರಿದಂತೆ ಮತ್ತಿತರ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕವೇ ದಾಖಲೆಗಳನ್ನು ಭರ್ತಿ ಮಾಡಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದಕ್ಕಾಗಿಯೇ ಪ್ರತ್ಯೇಕವಾದ ಸಾಫ್ಟ್‍ವೇರ್‍ವೊಂದನ್ನು ಅಭಿವೃದ್ಧಿಪಡಿಸಿದ್ದು, ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಸಿಇಟಿ […]