ಹಠ ಸಾಧಿಸುತ್ತಿರುವ ಹಿಜಾಬ್ ಧಾರಿಗಳು, ಸರ್ಕಾರ-ಕೋರ್ಟ್ ಆದೇಶ ಲೆಕ್ಕಕ್ಕೆ ಇಲ್ಲ
ಬೆಂಗಳೂರು,ಫೆ.15- ಹಿಜಾಬ್ ವಿವಾದದ ಗೊಂದಲ ಮುಂದುವರೆದಿದೆ.ಹಿಜಾಬ್ ಧರಿಸಲು ಅವಕಾಶ ನೀಡದಿರುವುದಕ್ಕೆ ಇಂದು ಕೂಡ ಹಲವೆಡೆ ವಿದ್ಯಾರ್ಥಿಗಳು, ಪೋಷಕರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವೆಡೆ ವಿದ್ಯಾರ್ಥಿಗಳು ಗೈರುಹಾಜರಾದರೆ, ಇನ್ನು ಕೆಲವೆಡೆ ಹಿಜಾಬ್ ಧರಿಸಿಯೇ ಶಾಲೆಗಳಿಗೆ ಆಗಮಿಸಿದ ದೃಶ್ಯಗಳು ಕಂಡುಬಂತು. ನಿನ್ನೆ ರಾಜ್ಯದ ಬಹುತೇಕ ಶಾಲೆಗಳಲ್ಲಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲೀಸರು ಬಿಗಿ ಕ್ರಮ ಕೈಗೊಂಡಿದ್ದರು. ರಾಯಚೂರು, ಕೊಪ್ಪಳ, ಗುಲ್ಬರ್ಗ, ಯಾದಗಿರಿ, ಶಿವಮೊಗ್ಗ, ಬಳ್ಳಾರಿ, ಬೆಳಗಾವಿ ಸೇರಿದಂತೆ ವಿವಿಧೆಡೆ ಇರುವ […]