ಬೂಸ್ಟರ್ ಲಸಿಕೆ ಹಾಕಿಸಿಕೊಂಡು ಪ್ರಾಣ ಉಳಿಸಿಕೊಳ್ಳಿ

ಬೆಂಗಳೂರು,ಡಿ.22- ನಗರದಲ್ಲಿ ಮತ್ತೆ ಕೊರೊನಾ ಕಾಟ ಆರಂಭವಾಗುವ ಸಾಧ್ಯತೆ ಇರುವುದರಿಂದ ಇದುವರೆಗೂ ಬೂಸ್ಟರ್ ಡೋಸ್ ಪಡೆದುಕೊಳ್ಳದೆ ಇರುವವರು ಕೂಡಲೇ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂಸ್ಟರ್ ಡೋಸ್‍ಗಳು ಲ್ಯಾಪ್ಸ್ ಆಗುತ್ತಿರುವುದರಿಂದ ಇದುವರೆಗೂ ಬೂಸ್ಟರ್ ಪಡೆದುಕೊಳ್ಳದವರೂ ಕೂಡಲೆ ಬೂಸ್ಟರ್ ಹಾಕಿಸಿಕೊಳ್ಳುವ ಮೂಲಕ ಸೋಂಕು ತಗುಲದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದ್ದಾರೆ. ಕೊರೊನಾ ಹರಡದಂತೆ ನೋಡಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ನಿನ್ನೆ ತಾಂತ್ರಿಕ […]