ಕೋವಿಡ್ ಉಲ್ಬಣ: ಕೆಲ ಶಾಲೆಗಳಲ್ಲಿ ತರಗತಿ ಸ್ಥಗಿತ

ಬೆಂಗಳೂರು,ಜ.4- ಓಮಿಕ್ರಾನ್ ಭೀತಿ ನಡುವೆಯೇ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕು ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಕೆಲ ಶಾಲೆಗಳು ಈಗಾಗಲೇ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿವೆ. ಇನ್ನು ಹಲವು ಶಾಲೆಗಳು ಕಾದು ನೋಡುವ ತಂತ್ರದ ಮೊರೆ ಹೋಗಿವೆ. ಶಾಲೆಗಳನ್ನು ಮುಚ್ಚುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳದ ಹಿನ್ನಲೆಯಲ್ಲಿ ಉಂಟಾಗಿರುವ ಗೊಂದಲದಿಂದ ಈ ರೀತಿಯಾಗುತ್ತಿದೆ ಎಂದು ಹೇಳಲಾಗಿದೆ. ಆನ್‍ಲೈನ್ ತರಗತಿಗಳಿಗೆ ಶಿಫ್ಟ್ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಯಾವುದೇ ಅಸೂಚನೆ ಹೊರಡಿಸದಿದ್ದರೂ, ಮಕ್ಕಳ ಸುರಕ್ಷತೆಯ […]