ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ಮೈಸೂರು,ಜ.8- ಜಿಲ್ಲೆಯಲ್ಲಿ ಶುಕ್ರವಾರ ದಿಢೀರನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಒಂದೇ ದಿನ 219 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.ಮೈಸೂರು ಜಿಲ್ಲೆಯಲ್ಲಿ ಗುರುವಾರ ಇದ್ದ 65 ಸೋಂಕಿನ ಪ್ರಕರಣ ನಿನ್ನೆ ಒಂದೆ ದಿನ ಮೂರು ಪಟ್ಟು ಏರಿಕೆಯಾಗಿ, ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಪ್ರಸ್ತುತ 484 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ ಜಿಲ್ಲೆಯಲ್ಲಿ 9 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 1,80,729 ಮಂದಿಗೆ ಸೋಂಕು ಪತ್ತೆಯಾಗಿದ್ದು, 1,77,817 ಮಂದಿ ಗುಣಮುಖರಾಗಿದ್ದಾರೆ. ಮೈಸೂರು ನಗರದಲ್ಲಿ 163 ಕೊರೊನಾ ಪ್ರಕರಣಗಳು […]