ರಾಜ್ಯದ ಜನತೆಗೆ ಮತ್ತಷ್ಟು ರಿಲೀಫ್, ಕೋವಿಡ್ ನಿಯಮ ಸಡಿಲಿಕೆ ಸಾಧ್ಯತೆ
ಬೆಂಗಳೂರು, ಜ.27- ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ವಿಧಿಸಿರುವ ನಿಯಮಗಳಿಗೆ ವಿನಾಯಿತಿ ನೀಡುವ ಕುರಿತಾಗಿ ತಜ್ಞರು ನೀಡುವ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಜ್ಞರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಅವರು ಸರ್ಕಾರಕ್ಕೆ ವರದಿ ನೀಡಿದ ನಂತರ ನಿಯಮಗಳನ್ನು ಮುಂದುವರೆಸಬೇಕೋ, ಇಲ್ಲವೇ ವಿನಾಯಿತಿ ನೀಡಬೇಕೋ ಎಂಬುದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈಗಿರುವ ನಿಯಮಗಳಿಗೆ ವಿನಾಯಿತಿ ನೀಡಬೇಕೆಂಬ ಬೇಡಿಕೆ […]