ಕೋವಿಡ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಜ.6- ಕೋವಿಡ್ ನಿಯಮಗಳನ್ನು ಯಾರೇ ಉಲ್ಲಂಘನೆ ಮಾಡಿ ದರೂ ಕಾನೂನು ಕ್ರಮ ಜರುಗಿಸ ಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಕೋವಿಡ್ ಸೋಂಕು ತೀವ್ರವಾಗಿ ಹರಡುವುದನ್ನು ತಡೆಯಲು ಕಠಿಣ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆಯೇ ಹೊರತು ರಾಜಕಾರಣಕ್ಕಾಗಿ ಅಲ್ಲ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರ ಜೀವ ರಕ್ಷಣೆಗಾಗಿ ಜಾರಿ ಮಾಡಿರುವ ಮಾರ್ಗಸೂಚಿಗಳನ್ನು ತಪ್ಪದೆ ಎಲ್ಲರೂ ಪಾಲಿಸಬೇಕು. ಸಾರ್ವಜನಿಕರಿಗೊಂದು, ಕಾಂಗ್ರೆಸ್‍ಗೊಂದು, ಬಿಜೆಪಿಗೆ ಮತ್ತೊಂದು, ಜೆಡಿಎಸ್‍ಗೆ ಇನ್ನೊಂದು ಎಂಬ ರೀತಿಯಲ್ಲಿ ನಿಯಮಗಳಿಲ್ಲ. […]