4 ದಿನಗಳಲ್ಲಿ 300ಕ್ಕೂ ಹೆಚ್ಚು ವೈದ್ಯರಿಗೆ ಕೊರೋನಾ..!

ಮುಂಬೈ.ಜ.7-ಮಹಾರಾಷ್ಟ್ರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ 300 ಕ್ಕೂ ಹೆಚ್ಚು ವೈದ್ಯರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ವಿವಿಧ ಆಸ್ಪತ್ರೆಗಳ 338 ನಿವಾಸಿ ವೈದ್ಯರು ಕರೋನವೈರಸ್‍ನಿಂದ ಬಾದಿತರಾಗಿದ್ದಾರೆ ಎಂದು ಮಹಾರಾಷ್ಟ್ರ ಅಸೋಸಿಯೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಧ್ಯಕ್ಷ ಡಾ.ಅವಿನಾಶ್ ದಹಿಫಾಲೆ ಹೇಳಿದ್ದಾರೆ. ಈ ವಾರದ ಆರಂಭದಲ್ಲಿ, ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ರಾಮ್ ಮನೋರ್ಹ ಲೋಹಿಯಾ ಆಸ್ಪತ್ರೆಯ್ಲ 38 ವೈದ್ಯರು ಸೇರಿದಂತೆ 45 ಆರೋಗ್ಯ ಕಾರ್ಯಕರ್ತರು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ […]