ಮುಕ್ತ ಮಾರುಕಟ್ಟೆಯಲ್ಲಿ ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಮಾರಾಟ ಮಾಡಲು ಡಿಸಿಜಿಐ ಶಿಪಾರಸು

ನವದೆಹಲಿ, ಜ.20- ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಲು ಔಷಧ ಗುಣಮಟ್ಟ ನಿಯಂತ್ರಣ ಮಂಡಳಿ (ಡಿಸಿಜಿಐ) ಸರ್ಕಾರಕ್ಕೆ ಶಿಪಾರಸು ಮಾಡಿದೆ. ಕೊರೊನಾ ವಿರುದ್ಧ ಹೋರಾಡಲು ಜನತೆಗೆ ಉಚಿತವಾಗಿ ಒದಗಿಸಲಾಗುತ್ತಿರುವ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಅನ್ನು ಮುಕ್ತ ಮಾರುಕಟ್ಟೆಯಲ್ಲಿ ಒದಗಿಸಲು ಅವಕಾಶ ನೀಡುವಂತೆ ಡಿಜಿಸಿಐ ಕೇಂದ್ರಕ್ಕೆ ಶಿಪಾರಸು ಮಾಡಿದೆ. ಈ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಗೆ ತರಲು ಭಾರತ ಬಯೋಟಿಕ್ ಮತ್ತು ಸಿರೋಂ ಇನ್ಸಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗಳು ಅರ್ಜಿಗಳನ್ನು ಸಲ್ಲಿಸಿದ್ದವು. […]