ಬೆಂಗಳೂರಲ್ಲಿ ಕ್ರೈಂ ರೇಟ್ ಹೇಗಿದೆ..? ಕಮಿಷನರ್ ಪ್ರತಾಪ್ ರೆಡ್ಡಿ ಹೇಳೋದೇನು..?

ಬೆಂಗಳೂರು, ಜ.4- ನಗರದಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣದಲ್ಲಿವೆ. 2019ಕ್ಕೆ ಹೋಲಿಸಿದರೆ ಕಳೆದ ವರ್ಷ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿ 9962 ಪ್ರಕರಣಗಳು ದಾಖಲಾಗಿದ್ದರೆ, 2022ರಲ್ಲಿ 9281 ಪ್ರಕರಣಗಳು ದಾಖಲಾಗಿವೆ ಎಂದು ಅವರು ವಿವರಿಸಿದರು. ನಗರದಲ್ಲಿ ಒಟ್ಟಾರೆಯಾಗಿ 2022ರಲ್ಲಿ 28518 ಐಪಿಸಿ ಪ್ರಕರಣಗಳು ದಾಖಲಾಗಿರುತ್ತವೆ. ಈ ಪ್ರಕರಣಗಳನ್ನು ಕಳೆದ ಮೂರು ವರ್ಷಗಳಿಗೆ ಹೋಲಿಸಿದಾಗ ಗಮನಾರ್ಹವಾಗಿ ಏರಿಕೆಯಾಗಿಲ್ಲ. 2021ನೇ ಸಾಲಿನಲ್ಲಿ ಕೋವಿಡ್ ನಿಮಿತ್ತ ಲಾಕ್‍ಡೌನ್, ರಾತ್ರಿ ಸಂಚಾರ […]