ಸ್ಯಾಂಟ್ರೋ ರವಿ ಆಸ್ತಿ ಮುಟ್ಟುಗೋಲಿಗೆ ಸಿಎಂ ಸೂಚನೆ

ಹುಬ್ಬಳ್ಳಿ,ಜ.10- ರೌಡಿಶೀಟರ್ ಹಿನ್ನಲೆಯ ಸ್ಯಾಂಟ್ರೊ ರವಿಗೆ ಸೇರಿದ ಆಸ್ತಿಯನ್ನು ಮುಟುಗೋಲು ಹಾಕಿಕೊಳ್ಳಲು ಸೂಚನೆ ನೀಡಲಾಗಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಎಲ್ಲೆಲ್ಲಿ ಕಾನೂನು ಬಾಹಿರವಾಗಿ ಆಸ್ತಿ ಸಂಪಾದಿಸಿದ್ದಾನೋ ಅದೆಲ್ಲವನ್ನು ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಆತನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಇಂತಿಷ್ಟೇ […]