ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸಿ.ಟಿ.ರವಿ ವ್ಯಂಗ್ಯ

ಬೆಂಗಳೂರು,ಅ.6-ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಒಪ್ಪಿದರೆ ಮಾತ್ರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತದೆ. ಇಲ್ಲದಿದ್ದರೆ ನಾಟಕ ಶುರುವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50 ವರ್ಷ ರಾಜಕೀಯ ಅನುಭವ ಇರುವ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯರಿಗೆ ಸೋನಿಯಾಗಾಂಧಿ ಕೇಳಿ ಚುನಾವಣೆಗೆ ನಿಲ್ಲುವ ದುಸ್ಥಿತಿ ಬರಬಾರದಿತ್ತು. ಇದು ಕಾಂಗ್ರೆಸ್‍ನ ಹಣೆಬರಹ ಎಂದು ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆಯವರು ಸ್ವ ಇಚ್ಚೆಯಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿಲ್ಲ. ಸೋನಿಯಾಗಾಂ […]