ಕಸ್ಟಮ್ಸ್ ಅಧಿಕಾರಿ ಹೆಸರಿನಲ್ಲಿ ಹಣ ಪಡೆದು ವಂಚಿಸಿದ್ದ ದಂಪತಿ ಸೆರೆ

ಬೆಂಗಳೂರು, ನ.24- ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ಏರ್‍ಪೆಪೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಹಾಗೂ ಕಡಿಮೆ ಬೆಲೆಗೆ ಚಿನ್ನಾಭರಣವನ್ನು ಕೊಡಿಸುವುದಾಗಿ ನಂಬಿಸಿ ಪರಿಚಯಸ್ಥರಿಂದ ಹಣ ವಸೂಲಿ ಮಾಡಿ ವಂಚಿಸಿದ್ದ ದಂಪತಿಯನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿ, 34.50 ಲಕ್ಷ ರೂ. ನಗದು ಹಾಗೂ 106.965 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ದರ್ಬಿನ್ ದಾಸ್ ಅಲಿಯಾಸ್ ಮೋಹನ್ ದಾಸ್ ಹಾಗೂ ಧನುಷ್ಯ ಅಲಿಯಾಸ್ ರಾಚೆಲ್ ಬಂಧಿತ ವಂಚಕ ದಂಪತಿ.ಇಂದಿರಾನಗರದಲ್ಲಿ ನೈಲ್‍ಬಾಕ್ಸ್ ಅಕಾಡೆಮಿ ನಡೆಸುತ್ತಿರುವ ಸ್ನೇಹ ಕೆ ಭಗವತ್ ಎಂಬುವರಿಗೆ […]