ದಿನದ 24 ಗಂಟೆ ಕಾರ್ಯನಿರ್ವಹಿಸುವ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್

ಬೆಂಗಳೂರು, ಫೆ.17- ಸರ್ಕಾರಿ ವೆಬ್‍ಸೈಟ್‍ಗಳು, ಆನ್-ಲೈನ್ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ ದಿನದ 24 ಗಂಟೆಯೂ ಸೇವೆಯಲ್ಲಿರುವಂತೆ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಸೈಬರ್ ಸೆಕ್ಯುರಿಟಿ ಆಪರೇಷನ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್-2 ಯೋಜನೆ […]