ಮಾಂಡೋಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಚಳಿ

ಬೆಂಗಳೂರು,ಡಿ.9- ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಬೀಳುತ್ತಿರುವ ಜಿಟಿಜಿಟಿ ಮಳೆ ಇನ್ನೂ ಮೂರು ದಿನಗಳ ಕಾಳ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತವು ದುರ್ಬಲಗೊಂಡು ವಾಯುಭಾರ ಕುಸಿತವಾಗಿ ಮಾರ್ಪಟ್ಟಿದ್ದು, ಅದರ ಪ್ರಭಾವವು ಇಳಿಮುಖವಾಗತೊಡಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಅಧಿಕ ಪ್ರಮಾಣ ಮಳೆಯಾದ ವರದಿಯಾಗಿದೆ. ಕಾಂಗ್ರೆಸ್‍ಗೆ ಕಂಟಕವಾದ AAP ಮತ್ತು AIMIM ಶುಕ್ರವಾರದಿಂದಲೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ […]

ಮಾನ್‍ಡೋಸ್ ಚಂಡಮಾರುತ, ರಾಜ್ಯದಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು,ಡಿ.9- ಬಂಗಾಳಕೊಲ್ಲಿ ಯಲ್ಲಿ ಉಂಟಾಗಿರುವ ಮಾನ್‍ಡೋಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಆಗಾಗ್ಗೆ ಹಗುರ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಯಂತೆ ಮಂಗಳವಾರದವರೆಗೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಕೆಲವೆಡೆ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಮಾನ್‍ಡೋಸ್ ಚಂಡಮಾರುತವು ತಮಿಳುನಾಡು ತಲುಪಿದ್ದು, ಉತ್ತರಾಭಿಮುಖವಾಗಿ ಆಂಧ್ರಪದ್ರೇಶದ ಕಡೆಗೆ ಚಲಿಸುತ್ತಿದೆ. ಇದರಿಂದ ತಮಿಳುನಾಡಿನ ಉತ್ತರ ಭಾಗ ಹಾಗೂ ಆಂಧ್ರಪ್ರದೇಶದ ದಕ್ಷಿಣ […]