ನಾನೇನು ಸನ್ಯಾಸಿ ಅಲ್ಲ, ಸಿಎಂ ಆಗುವ ಸಮಯ ಬಂದಿದೆ : ಗುಡುಗಿದ ಡಿಕೆಶಿ

ಮೈಸೂರು,ಜು.19- ಕೆಪಿಸಿಸಿ ಅಧ್ಯಕ್ಷರಾಗಿರುವವರೇ ಮುಖ್ಯಮಂತ್ರಿ ಯಾಗುವುದು ಸಹಜ, ಈಗ ಉತ್ತಮ ಅವಕಾಶ ಬಂದಿದೆ. ಈ ಹಿನ್ನೆಲೆಯಲ್ಲಿ ಸಮುದಾಯ ನನ್ನ ಬೆನ್ನ ಹಿಂದೆ ನಿಲ್ಲ ಬೇಕು, ಅವಕಾಶ ಕಳೆದುಕೊಳ್ಳಬಾರದು ಎಂದು ಹೇಳಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ಮೈಸೂರು ಪತ್ರಕರ್ತರ ಭವನದಲ್ಲಿ ಮಾದ್ಯಮದೊಂದಿಗೆ ಸಂವಾದ ನಡೆಸಿದ ವೇಳೆ ಮಾತನಾಡಿದ ಅವರು, ಈ ಮೊದಲು ಜುಲೈ 15ರಂದು ಒಕ್ಕಲಿಗರ ಸಮಾವೇಶದಲ್ಲಿ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಾವೇನು ಖಾವಿ ತೊಟ್ಟಿಲ್ಲ. ಅಧಿಕಾರಕ್ಕಾಗಿಯೇ ರಾಜಕಾರಣ ಮಾಡುತ್ತೇವೆ. ಎಸ್.ಎಂ.ಕೃಷ್ಣ ಕೆಪಿಸಿಸಿ […]