ಪಿಎಸ್‍ಐ ಹಗರಣಕ್ಕೆ ಸರ್ಕಾರವೇ ಹೊಣೆ: ಡಿಕೆಶಿ

ಬೆಂಗಳೂರು,ಜ.28- ಪಿಎಸ್‍ಐ ಹಗರಣದಲ್ಲಿ ಸರ್ಕಾರದ ಬೆಂಬಲ ಇರುವುದು ಖಚಿತ, ಈ ಸರ್ಕಾರ ನೇಮಕಾತಿ, ವ್ಯಾಸಂಗ ಹಾಗೂ ಪರೀಕ್ಷೆಗಳಲ್ಲೂ ಭ್ರಷ್ಟಚಾರ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‍ಐ ಹಗರಣದ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಾರೆ. ಸರ್ಕಾರದ ಬೆಂಬಲ ಇಲ್ಲದೆ ಅವರಿಗೆ ಜಾಮೀನು ಸಿಗಲು ಸಾಧ್ಯವಿರಲಿಲ್ಲ. ಸರ್ಕಾರದ ಎಲ್ಲಾ ಪ್ರಮುಖರು ಇದರಲ್ಲಿ ಹೊಣೆಯಾಗಿದ್ದಾರೆ ಎಂದಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವಿಸರ್ಜನೆ ಮಾಡುವುದಾಗಿ ಆ […]