ಕರಾವಳಿ ಭಾಗದಲ್ಲಿ ಹಂದಿಜ್ವರ ಹಾವಳಿ, ಎಚ್ಛೆತ್ತುಕೊಂಡ ಜಿಲ್ಲಾಡಳಿತ

ಮಂಗಳೂರು,ನ.5- ದಕ್ಷಿಣ ಕರಾವಳಿ ಭಾಗದಲ್ಲಿ ಹಂದಿಜ್ವರ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಕೆಲಾರೈ ಸಮೀಪ ನೀರಂಮಾರ್ಗ ಗ್ರಾಮದ ಹಂದಿ ಸಾಗಾಣಿಕೆ ಕೇಂದ್ರದಲ್ಲಿ ಹಂದಿಜ್ವರ ಕಾಣಿಸಿಕೊಂಡಿದ್ದು ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ತುರ್ತು ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಎಂಆರ್ ರವಿಕುಮಾರ್ ಈ ಬಗ್ಗೆ ಹೇಳಿಕೆ ನೀಡಿದ್ದು, ಆತಂಕಪಡುವ ಅಗತ್ಯವಿಲ್ಲ. ಹಂದಿಜ್ವರ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವುದಿಲ್ಲ. ಸರಿಯಾಗಿ ಬೇಯಿಸಿದ ಹಂದಿ ಮಾಂಸ ಸೇವನೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಹುಲಿ ಎಂದೂ ಹುಲ್ಲು ತಿನ್ನಲ್ಲ : ಸ್ವಪಕ್ಷೀಯರ ವಿರುದ್ಧವೇ ರೆಡ್ಡಿ ಕೆಂಡಾಮಂಡಲ […]

ಹತ್ಯೆಯಾದವರ ಮನೆಗಳಿಗೆ ಎಚ್‍ಡಿಕೆ ಭೇಟಿ, ತಲಾ 5 ಲಕ್ಷ ಪರಿಹಾರದ ಚೆಕ್ ಹಸ್ತಾಂತರ

ಮಂಗಳೂರು,ಆ.1- ದಕ್ಷಿಣ ಕನ್ನಡ ಜಿಲ್ಲೇಯ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಜಿಲ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರ ಧನದ ಚೆಕ್ ಹಸ್ತಾಂತರಿಸಿದರು. ಇಂದು ಬೆಳಗ್ಗೆಯೇ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಂದು ಪತ್ನಿ ನೂತನ ಹಾಗೂ ತಂದೆ-ತಾಯಿಗೆ ಸಾಂತ್ವನ ಹೇಳಿ ಯಾವುದೇ ಕಾರಣಕ್ಕೂ ಎದೆಗುಂದಬೇಡಿ. […]

ಮಂಗಳೂರಿಗೆ ಬಂದ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಮಂಗಳೂರು, ಜು.29- ಮಂಗಳೂರಿಗೆ ಆಗಮಿಸಿದ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ಮೃತನ ಮನೆಗೆ ಭೇಟಿ ನೀಡಿ ಸ್ವಾಂತ್ವಾನ ಹೇಳಲು ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಜಿಲ್ಲಾಕಾರಿಗಳು ಮುತಾಲಿಕ್ರವರ ಜಿಲ್ಲಾ ಪ್ರವೇಶವನ್ನು ನಿಷೇಸಿ ಆದೇಶ ಹೊರಡಿಸಿದರು. ಆದರೂ ಆಗಮಿಸಿದ್ದ ಪ್ರಮೋದ್ ಮುತಾಲಿಕರನ್ನು ಹೆಜಮಾಡಿ ಟೋಲ್ ಬಳಿ ತಡೆದು ಪೊಲೀಸರು ವಶಕ್ಕೆ ಪಡೆದು ಕೊಂಡರು.ಇದನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು […]

ಬೂದಿ ಮುಚ್ಚಿದ ಕೆಂಡವಾದ ಕರಾವಳಿ, ನಿಷೇಧಾಜ್ಞೆ ಜಾರಿ

ಮಂಗಳೂರು, ಜು.29- ಕರಾವಳಿಯಲ್ಲಿ ಮತ್ತೆ ಮತ್ತೆ ಕೊಲೆ ಪ್ರಕರಣಗಳು ಮರು ಕಳಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕದಲ್ಲಿದ್ದು, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಪೊಲೀಸ್ ಭದ್ರೆತೆಗಳನ್ನು ಹೆಚ್ಚಿಸಲಾಗಿದ್ದು, ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಜೆಪಿ ಯುವಮೋರ್ಚಾ ಪ್ರವೀಣ್ ನೆಟ್ಟಾರು, ಹತ್ಯೆ ನಂತರ ಸೂರತ್‍ಕಲ್‍ಲ್ಲಿ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮೊಹಮ್ಮದ್ ಫಾಜಿಲ್ ಎಂಬ ಯುವಕರನ್ನು ಕೊಂದಿದ್ದು, ಇದರಿಂದ ಪರಿಸ್ಥಿತಿ ಬೀಗುವಿನಿಂದ ಕೂಡಿದೆ.ಸೂರತ್ಕಲ್, ಬಜ್ಪೆ, ಮುಲ್ಕಿ ಮತ್ತು ಪನ್ನಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ […]

ಉದ್ವಿಗ್ನಗೊಂಡಿದ್ದ ಕರಾವಳಿ ಕರಾವಳಿ ಶಾಂತ, ಎಲ್ಲೆಡೆ ನೀರವ ಮೌನ

ಮಂಗಳೂರು, ಜು.28- ಉದ್ವಿಗ್ನಗೊಂಡಿದ್ದ ಕರಾವಳಿ ಭಾಗ ಈಗ ಶಾಂತವಾಗಿದೆ. ಎಲ್ಲೆಡೆ ನೀರವ ಮೌನ ಆವರಿಸಿದೆ.ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಂತರ ವ್ಯಾಪಕ ಪ್ರತಿಭಟನೆಗಳು ನಡೆದು ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ಪೊಲೀಸರ ಸರ್ಪಗಾವಲಿನ ನಡುವೆ ನಿನ್ನೆ ಅಂತ್ಯಕ್ರಿಯೆಯೂ ನಡೆದಿದ್ದು, ಪುತ್ತೂರು, ಸುಳ್ಯ, ಬೆಳ್ಳಾರೆ ಸೇರಿದಂತೆ ಹಲವು ಭಾಗಗಳಲ್ಲಿ ಶಾಂತ ಪರಿಸ್ಥಿತಿ ಇದೆ. ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿರುವುದರಿಂದ ಹಿಂದೂಪರ ಸಂಘಟನೆಗಳ ಕೋಪದ ಕಟ್ಟೆಯೊಡೆದಿದ್ದು, ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಯಾವುದೇ […]

ಮಳೆ ಆರ್ಭಟಕ್ಕೆ ಕೊಡಗಿನ ಅಯ್ಯಪ್ಪ ಬೆಟ್ಟ ಬಿರುಕು, ನೂರಾರು ಜನರ ಸ್ಥಳಾಂತರ

ಬೆಂಗಳೂರು,ಜು.16- ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭೂ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ನದಿಗಳು ಉಕ್ಕಿ ಹರಿದು, ಜಲಾಶಯಗಳು ಭರ್ತಿಯಾಗಿ ಒಳಹರಿವು ಹೆಚ್ಚಾಗಿ ನದಿಪಾತ್ರದ ಜನರನ್ನು ಸ್ಥಳಾಂತರ ಮಾಡಲಾಗಿದೆ.ಹಾಸನದಿಂದ ಸಕಲೇಶಪುರ ಮಾರ್ಗದಲ್ಲಿ ದೋಣಿಗಲ್ ಸಮೀಪ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್ ಸಂಪರ್ಕ ಬಂದ್ ಮಾಡಲಾಗಿದೆ. ಕಳೆದ 10 ದಿನಗಳಿಂದ ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ನದಿ, ತೊರೆ, […]

ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನ : ಸಿಎಂ

ಉಡುಪಿ,ಜು.13- ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು, ದಕ್ಷಿಣ ಕನ್ನಡ ಭಾಗಗಳಲ್ಲಿ ಭೂ ಕುಸಿತ, ಭೂ ಕಂಪನಕ್ಕೆ ಸಂಬಂಧಿಸಿದಂತ ನಾಲ್ಕು ಸಂಸ್ಥೆಗಳ ಮೂಲಕ ಅಧ್ಯಯನಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು. ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಕರಾವಳಿಯ ಮೂರು ಜಿಲ್ಲೆಗಳ ಕಡಲ್ಕೊರೆತ, ಮಳೆಹಾನಿ, ಪ್ರವಾಹ ಪರಿಸ್ಥಿತಿ ಸಹಿತ ವಿವಿಧ ವಿಷಯಗಳ […]

ಮಲೆನಾಡು, ದಕ್ಷಿಣ ಕನ್ನಡದಲ್ಲಿ ತಗ್ಗಿದ ಮಳೆ ಆರ್ಭಟ

ಬೆಂಗಳೂರು,ಜು.13- ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಮಳೆ ಕಡಿಮೆಯಾಗಿರುವುದರಿಂದ ಕಾವೇರಿ ಕಣಿವೆಯ ನದಿಗಳ ಪ್ರವಾಹವು ಇಳಿಕೆಯಾಗತೊಡಗಿದೆ. ಕೆಆರ್‍ಎಸ್ ಜಲಾಶಯಕ್ಕೆ ನಿನ್ನೆ 72ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಇಂದು 57 ಸಾವಿರ ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಆದರೆ, ಕಬಿನಿ ಜಲಾಶಯಕ್ಕೆ ಮಾತ್ರ 34ಸಾವಿರ ಕ್ಯೂಸೆಕ್‍ನಷ್ಟು ನೀರು ಹರಿದು ಬರುತ್ತಿದೆ. ಹೀಗಾಗಿ ಜಲಾಶಯದಿಂದ 38 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಕಪಿಲಾ ನದಿಗೆ ಬಿಡಲಾಗಿದೆ. ಕೆಆರ್‍ಎಸ್ ಜಲಾಶಯದಿಂದ 51ಸಾವಿರಕ್ಕೂ ಹೆಚ್ಚು ಕ್ಯೂಸೆಕ್ […]

ನಾಳೆ ಕೊಡಗು- ದಕ್ಷಿಣ ಕನ್ನಡಕ್ಕೆ ಜಿಲ್ಲೆಗಳಿಗೆ ಸಿಎಂ ಭೇಟಿ

ಬೆಂಗಳೂರು,ಜು.11-ಸತತ ಮಳೆಯಿಂದ ತತ್ತರಿಸಿರುವ ಕೊಡುಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಳೆ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಳೆದ 10 ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸಲಹೆ ಸೂಚನೆ ನೀಡಲಾಗಿದೆ. […]

ಕೊಡಗು ಮತ್ತು ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯ ನಡುವೆಯೇ ನಡುಗಿದ ಭೂಮಿ..!

ಬೆಂಗಳೂರು,ಜು.10- ನಿರಂತರ ಮಳೆಯ ನಡುವೆ ಕೊಡಗು ಮತ್ತು ದಕ್ಷಿಣಕನ್ನಡದಲ್ಲಿ ಮತ್ತೆ ಭೂಕಂಪನವಾಗಿದೆ. ಮಡಿಕೇರಿಯ ಕರಕೆ, ಗೂನಡ್ಕ ಭಾಗದಲ್ಲಿ ಬೆಳಗ್ಗೆ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಉಂಟು ಮಾಡಿದೆ. ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕಿನ ಚೆಂಬು, ಸಂಪಾಜೆ ಭಾಗಗಳಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭಾರೀ ಶಬ್ದ ಉಂಟಾಗಿದ್ದು, ಜನ ಭೀತಿಗೊಳಗಾಗಿದ್ದಾರೆ. ಆತಂಕದಲ್ಲಿ ದಿನದೂಡುವಂತಾಗಿದೆ.ಈ ಮಳೆಗಾಲದಲ್ಲಿ ಈ ಭಾಗಗಳಲ್ಲಿ ಸಂಭವಿಸಿದ 10ನೇ ಬಾರಿ ಭೂಕಂಪ ಇದಾಗಿದೆ. 2018ರಲ್ಲಿ ಇದೇ ರೀತಿ ಭೂಮಿ ಕಂಪಿಸಿ ಗುಡ್ಡ ಕುಸಿತ ಉಂಟಾಗಿ […]