ಬಿಜೆಪಿಯಿಂದ ದಲಿತರಿಗೆ ಅನ್ಯಾಯ, ಕಾಂಗ್ರೆಸ್‍ನಿಂದ ರಾಜಭವನ ಚಲೋ

ಬೆಂಗಳೂರು,ಮಾ.24- ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕುರಿತಂತೆ ಸುಳ್ಳು ಭರವಸೆಗಳನ್ನು ನೀಡಿ, ಬಿಜೆಪಿ ಸರ್ಕಾರ ದಲಿತರಿಗೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ನಡೆಸಿದೆ. ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಬಳಿಕ ಮೆರವಣಿಗೆ ಮೂಲಕ ರಾಜಭವನಕ್ಕೆ ತೆರಳಲು ಕಾಂಗ್ರೆಸ್ ನಾಯಕರು ಯತ್ನಿಸಿದರು. ಅವರನ್ನು ಪೊಲೀಸರು ಇಂಡಿಯನ್ ಎಕ್ಸಪ್ರೆಸ್ ಸರ್ಕಲ್ ಬಳಿ ತಡೆದರು. ನಡು ರಸ್ತೆಯಲ್ಲೇ ಕಾಂಗ್ರೆಸ್ ನಾಯಕರು ಧರಣಿ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, […]
ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಹೊಸಪೇಟೆ, ಅ.12- ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ಸಡಗರದ ವಾತಾವರಣ. ಅಡುಗೆ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬೆಳಗಿನ ಉಪಾಹಾರದ ತಯಾರಿಯಲ್ಲಿ ನಿರತರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟಿನ ತಯಾರಿಯಲ್ಲಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ […]