ಡೇಂಜರ್ ಸಿಟಿಯಾಗಿ ಬದಲಾದ ಸಿಲಿಕಾನ್ ಸಿಟಿ ಬೆಂಗಳೂರು..!

ಬೆಂಗಳೂರು, ಜ.8-ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿರುವುದನ್ನು ನೋಡಿದರೆ ಬೆಂಗಳೂರು ಡೇಂಜರ್ ಸಿಟಿಯಾಗಿ ಪರಿವರ್ತನೆಗೊಳ್ಳುತ್ತಿರುವುದರ ಮುನ್ಸೂಚನೆಯಂತಿದೆ. ಕಳೆದ ಐದು ದಿನಗಳಲ್ಲಿ ಬರೊಬ್ಬರಿ 24 ಸಾವಿರ ಮಂದಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಈ ಭೀತಿ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ 7 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.ನಿನ್ನೆ ನಗರದಲ್ಲಿ 6613 ಸೋಂಕಿತರು ಪತ್ತೆಯಾಗಿದ್ದರು ಇಂದು ಸೋಂಕಿತರ ಸಂಖ್ಯೆಯಲ್ಲಿ ಒಂದು ಸಾವಿರಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆಗಳಿವೆ. ಇಂದು 7113 […]