ಭಯೋತ್ಪಾದಕರ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ

ಜಮ್ಮು,ಫೆ.8- ಧಾಂಗ್ರಿ ಗ್ರಾಮದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ರಜೌರಿ ಜಿಲ್ಲೆಯಲ್ಲಿ ಅಡಗಿಕೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದು, ಅವರ ಬಗ್ಗೆ ಮಾಹಿತಿ ನೀಡುವವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಮಂಗಳವಾರ ರಾತ್ರಿ ಹೊರಡಿಸಿರುವ ಪ್ರಕಟಣೆಯಲ್ಲಿ, ಭಯೋತ್ಪಾದಕರಿಗೆ ಸಹಾಯ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜನವರಿ 1 ರಂದು ರಾಜೌರಿಯ ಧಾಂಗ್ರಿ ಗ್ರಾಮದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ, ಏಳು ಜನರನ್ನು ಹತ್ಯೆ ಮಾಡಿದ್ದರು, 14 ಮಂದಿ […]