ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್, ಯದುವೀರ್ ಸಿಂಹಾಸನಾರೋಹಣ

ಮೈಸೂರು, ಸೆ.26:- ವಿಶ್ವವಿಖ್ಯಾತ ಮೈಸೂರು ದಸರಾ 2022ಕ್ಕೆ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಿದ್ದು, ಈ ಮೂಲಕ ಅರಮನೆ ಒಳಾಂಗಣ ಪಾರಂಪರಿಕ ದಸರಾ ಕಾರ್ಯಕ್ರಮಗಳ ಆರಂಭಕ್ಕೆ ಚಾಲನೆ ದೊರೆತಿದೆ. ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು 10 ದಿನಗಳ ಕಾಲ ನಡೆಯಲಿವೆ. ನವರಾತ್ರಿ ಮೊದಲ ದಿನವಾದ ಸೋಮವಾರ ಮುಂಜಾನೆ 5.10ರಿಂದ 5.30ರೊಳಗೆ ದರ್ಬಾರ್ ಹಾಲ್‍ನಲ್ಲಿ ಜೋಡಿಸಲಾಗಿರುವ ಸಿಂಹಾಸನಕ್ಕೆ `ಸಿಂಹ’ ಜೋಡಣಾ ಕಾರ್ಯ ನಡೆಯಿತು. ನಂತರ ಬೆಳಿಗ್ಗೆ 8.05ರಿಂದ 8.55ರವರೆಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ […]